ಬಾಲ ಕಾರ್ಮಿಕ ಪ್ರಕರಣ ಗಂಭೀರವಾಗಿ ಪರಿಗಣಿಸಿ-ಜಿಲ್ಲಾಧಿಕಾರಿ ಡಾ.ಆನಂದ ಕೆ
Consider child labor case seriously - District Magistrate Dr. Anand K.
ವಿಜಯಪುರ ಫೆ.7 : ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾನೂನು ಕುರಿತಾಗಿ ವ್ಯಾಪಕ ಜಾಗೃತಿ ಮೂಡಿಸಲು ಬೇಕರಿ, ಇಟ್ಟಂಗಿ ಭಟ್ಟಿ, ಹೊಟೇಲ್, ಧಾಬಾ ಸೇರಿದಂತೆ ವಿವಿಧ ಕಡೆಗಳಲ್ಲಿ ಕಾಯ್ದೆಯ ಕುರಿತ ಎಲ್ಲರಿಗೂ ಕಾಣುವ ಹಾಗೆ ಮಾಹಿತಿ ಫಲಕ ಅಳವಡಿಸಿಕೊಳ್ಳಲು ಮಾಲೀಕರಿಗೆ ಅಗತ್ಯ ತಿಳುವಳಿಕೆ ನೀಡುವಂತೆ ಸೂಚಿಸಿದ ಅವರು, ಬಾಲ ಕಾರ್ಮಿಕ ಪ್ರಕರಣವನ್ನು ಅತ್ಯಂತ ಗಂಭಿರವಾಗಿ ಪರಿಗಣಿಸುವಂತೆಯೂ ಇನ್ನಷ್ಟು ಕ್ರಿಯಾಶೀಲವಾಗಿ ಎಲ್ಲ ಇಲಾಖಾ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ, ಜಿಲ್ಲೆಯಲ್ಲಿ ಬಾಲ ಕಾರ್ಮಿಕ ಪ್ರಕರಣಗಳು ಆಗದಂತೆ ನಿಗಾ ವಹಿಸಬೇಕುಎಂದು ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಘದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ಆನಂದ ಕೆ ಹೇಳಿದರು.
ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ, ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ ಪತ್ತೆ ಆಗಿರುವ ಬಾಲ ಕಾರ್ಮಿಕ ಪ್ರಕರಣ ಮಾಹಿತಿ, ವ್ಯಾಸಂಗ ಮಾಡುತ್ತಿರುವ ಶಾಲಾ ವಿವರ ಕುರಿತ ವಿಸ್ತೃತ ವರದಿಯನ್ನು ಕ್ರೋಢಿಕರಿಸಿ ಶೀಘ್ರ ಸಲ್ಲಿಸಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳ ವರದಿ ನೀಡಬೇಕು. ಶಾಲೆಯಿಂದ ಹೊರಗುಳಿದ ಮಕ್ಕಳು ಕಂಡು ಬಂದಲ್ಲಿ, ಮಕ್ಕಳ ಬಗ್ಗೆ ಪರೀಶೀಲನೆ ಮಾಡಿ, ಅವರನ್ನು ಶಾಲೆಗೆ ಕಳುಹಿಸುವಂತೆ ಪಾಲಕರಿಗೆ ತಿಳುವಳಿಕೆ ನೀಡಬೇಕು. ಶಾಲಾ ಮುಖ್ಯೋಪಾಧ್ಯಾಯರು ಒಂದು ವಾರಕ್ಕಿಂತ ಹೆಚ್ಚು ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ತೀವ್ರ ನಿಗಾವಹಿಸಿ, ಖುದ್ದು ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಬೇಕು. ಮಕ್ಕಳ ಬಾಲ್ಯ ಸುಂದರಗೊಂಡು ಅವರ ಜೀವನ ಉಜ್ವಲವಾಗುವ ನಿಟ್ಟಿನಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿ ತಡೆಗೆ ಮುತು ವರ್ಜಿವಹಿಸಿ ಕಾರ್ಯ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈಗಾಗಲೇ ರಕ್ಷಿಸಿದ ಮಗು ಮತ್ತೆ ಬಾಲ ಕಾರ್ಮಿಕರಾಗದೇ ಇರುವ ಬಗ್ಗೆ ಖಚಿತಪಡಿಸಿ, ನಿಖರ ಮಾಹಿತಿ ಒದಗಿಸಬೇಕು. ಉತ್ತಮ ಶಿಕ್ಷಣ ಪಡೆದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಬೇಕು.ಅಂಥ ಮಗು ಶಾಲೆಯಿಂದ ಹೊರಗುಳಿಯದಂತೆ ಎಲ್ಲ ಮುಖ್ಯೋಪಾಧ್ಯಾಯರಿಗೆ ಮನವರಿಕೆ ಮಾಡಿಕೊಡಬೇಕು.
ವಿವಿಧ ಇಲಾಖೆಯ ನೆರವು ಪಡೆದುಕೊಂಡು ಹೋಟೆಲ್, ಇಟ್ಟಂಗಿ ಭಟ್ಟಿಗಳಲ್ಲಿ ನಿರಂತರವಾಗಿ ಪರೀಶೀಲನೆ ಮಾಡಬೇಕು. ಬಾಲಕಾರ್ಮಿಕರನ್ನು ನೇಮಿಸಿಕೊಂಡಲ್ಲಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಲು ಕ್ರಮ ವಹಿಸುವಂತೆ ಅವರು ಸೂಚಿಸಿದರು.
ಜಿಲ್ಲೆಯಲ್ಲಿರುವ ಬಾಲಕಾರ್ಮಿಕರ ರಕ್ಷಣೆಗೆ ನಿಯಮಿತವಾಗಿ ಸಂಬಂಧಿಸಿದ ಇಲಾಖೆಗಳ ತಂಡಗಳನ್ನು ರಚಿಸಿಕೊಂಡು ಪ್ರತಿ ತಿಂಗಳು ತಾಲೂಕಾ ಮಟ್ಟದಲ್ಲಿ ತಹಶೀಲ್ದಾರ ಅವರ ನೇತೃತ್ವದಲ್ಲಿ ನಿಯಮಾನುಸಾರ ನೇಮಕಗೊಂಡ ಎಲ್ಲಾ ಇಲಾಖೆಯ ಅಧಿಕಾರಿಗಳು ಅನೀರೀಕ್ಷಿತ ದಾಳಿ ಮಾಡಬೇಕು. ಅದರಲ್ಲೂ ತಾಲೂಕ ಮಟ್ಟದ ಕಾರ್ಯಪಡೆ ಸಭೆಯನ್ನು ಕಾಲ-ಕಾಲಕ್ಕೆ ನಡೆಸಬೇಕು.ರಕ್ಷಣೆ ಮಾಡಿದ ಬಾಲ ಕಾರ್ಮಿಕರ ಪುನರ್ ವಸತಿಗಾಗಿ 20,000 ರೂ. ಮಾಲೀಕರಿಂದ ಪಡೆದು, ಸ್ಥಿರ ಠೇವಣಿ ಇರಿಸಿ, 18 ವರ್ಷದ ನಂತರ ಹಣ ಹಿಂದಿರುಗಿಸಲು ಕ್ರಮ ವಹಿಸಬೇಕು.ಮಕ್ಕಳಿಗೆ ಹಾಗೂ ಪೋಷಕರಿಗೆ ಶಿಕ್ಷಣದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಬೇಕು.
ಬಾಲಕಾರ್ಮಿಕ ನಿಷೇಧ ಕಾಯ್ದೆ ಬಗ್ಗೆ ಅರಿವು ಮೂಡಿಸಲು ಶಾಲಾ ಕಾಲೇಜಿನಲ್ಲಿ ಕ್ವಿಜ್, ಪ್ರಬಂಧ ಸ್ಪರ್ಧೆ,ರಂಗೋಲಿ ಬಿಡಿಸುವ, ಬೀದಿ ನಾಟಕ ಆಯೋಜನೆ ಒಳಗೊಂಡಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಅವರು ಸೂಚಿಸಿದರು.
ಸಭೆಯಲ್ಲಿ ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಈರಯ್ಯ ಸಾಲಿಮಠ, ಜಿಲ್ಲಾ ಕಾರ್ಮಿಕ ಅಧಿಕಾರಿ ಉಮಾಶ್ರೀ ಕೋಳಿ, ಜಿಲ್ಲಾ ಪಂಚಾಯತಿಯ ಮುಖ್ಯಲೆಕ್ಕಾಧಿಕಾರಿ ರಾಮಣ್ಣ ಅಥಣಿ, ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 