ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ 15: ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ ಸರಕಾರಿ ಕಛೇರಿಗಳ ಸಂಕೀರ್ಣದ 3ನೇ ಮಹಡಿಯ ಸಭಾ ಭವನದಲ್ಲಿ ಕರ್ನಾಟಕ ಸರಕಾರದ ಸಮಾಜಕಲ್ಯಾಣ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ತಹಶೀಲ್ದಾರ ಸಂತೋಷ ಹಿರೇಮಠ ಅಧ್ಯಕ್ಷತೆಯಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ದಲಿತ ಸಂಘಗಳ ಸದಸ್ಯರು, ಸರಕಾರೇತರ ಸಂಘ-ಸಂಸ್ಥೆಯ ಮುಖಂಡರು ಹಾಗೂ ಸರಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು