ಕಂಟೇನರ್ ಲಾರಿ ಟೈಯರ್ ಬ್ಲಾಸ್ಟ್ : ಪ್ರಾಣಾಪಾಯದಿಂದ ಪಾರದ ಚಾಲಕ
ರಾಣೇಬೆನ್ನೂರು13: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಕಮದೊಡ ಮಿಲ್ ಬಳಿ ಕಂಟೇನರ್ ಲಾರಿ ಉರುಳಿ ಬಿದ್ದಿರುವ ಘಟನೆ ಸಂಭವಿಸಿದೆ.ಇದರಲ್ಲಿ ಬೆಂಗಳೂರಿನಿಂದ ಮುಂಬೈಗೆ 20 ಟನ್ ಕೋರಿಯರ್ ಸರಕು ವಸ್ತುಗಳನ್ನು ರವಾನಿಸಲಾಗುತ್ತಿತ್ತು ಎನ್ನಲಾಗಿದೆ. ಕಂಟೇನರ್ ಲಾರಿ ಟೈಯರ್ ಬ್ಲಾಸ್ಟ್ ಆದ ಪರಿಣಾಮ ರಾಷ್ಟ್ರೀಯ ಹೆದ್ದಾರಿ ಡಿವೈಡರ್ ದಾಟಿ ಉರುಳಿ ಬಿದ್ದಿರುವುದಾಗಿ ಹೇಳಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು,ಆದರೆ ಚಾಲಕನ ನಿಯಂತ್ರಣದಿಂದ ಯಾವುದೇ ಅಪಾಯ ಸಂಭವಿಸಿಲ್ಲ. ರಾಷ್ಟ್ರೀಯ ಹೆದ್ದಾರಿಯ ಟೋಲ್ ಪ್ಲಾಜ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಕಂಟೇನರ್ ಬಿದ್ದಿರುವುದನ್ನು ಮೇಲಕ್ಕೆತ್ತಿ ಸುಗಮ ಸಂಚಾರಕ್ಕೆ ದಾರಿ ಮಾಡಿಕೊಡಲಾಯಿತು. ಘಟನೆ ಕುರಿತು ಹಲಗೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ