ಎಡ್ಸ್ ಮುಕ್ತ ಜಿಲ್ಲೆಗಾಗಿ ನಿರಂತರ ಜಾಗೃತಿ ಅಗತ್ಯ: ಅಪರ ಜಿಲ್ಲಾಧಿಕಾರಿ
Continuous awareness needed for an AIDS-free district: Additional Deputy Commissioner
ಲೋಕದರ್ಶನ ವರದಿ
ಬಳ್ಳಾರಿ 14: ಎಚ್‌ಐವಿ/ಎಡ್ಸ್ ಮುಕ್ತವಾಗಿಸಲು ಸಾರ್ವಜನಿಕರಲ್ಲಿ ನಿರಂತರ ಜಾಗೃತಿ ಮೂಡಿಸುವುದು ಅತ್ಯಂತ ಅಗತ್ಯ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್. ರಬ್ಬಾನಿ ಹೇಳಿದರು. ನಗರದ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ‘ಮಿಷನ್ ಎಡ್ಸ್ ಸುರಕ್ಷಾ’ ಅಭಿಯಾನದ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಡ್ಸ್ಗೆ ಸಂಪೂರ್ಣ ಗುಣಮುಖಗೊಳಿಸುವ ಓಷಧ ಇನ್ನೂ ಲಭ್ಯವಿಲ್ಲ. ಆದ್ದರಿಂದ ಮುನ್ನೆಚ್ಚರಿಕೆ, ಸಮಯೋಚಿತ ಪರೀಕ್ಷೆ ಹಾಗೂ ಜಾಗೃತಿಯೇ ಸೋಂಕು ತಡೆಗೆ ಪರಿಣಾಮಕಾರಿ ಮಾರ್ಗ ಎಂದು ತಿಳಿಸಿದರು.
ಅಪಾಯದ ಗುಂಪಿನಲ್ಲಿರುವವರ ಆರ್ಥಿಕ ಸಬಲೀಕರಣಕ್ಕೂ ಹೆಚ್ಚಿನ ಒತ್ತು ನೀಡಬೇಕಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳನ್ನು ಸಮರ್ಕವಾಗಿ ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು. ಜಿಲ್ಲೆಯಾದ್ಯಂತ ಮನೆಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸುವ ಜೊತೆಗೆ ಆಶಾ ಕಾರ್ಯಕರ್ತೆಯರ ಮೂಲಕ ಜನಜಾಗೃತಿ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ಎಚ್‌ಐವಿ ಕುರಿತು ಅರಿವು ಮೂಡಿಸಲು ಪ್ರಬಂಧ ಸ್ಪರ್ಧೆ, ಜಾನಪದ ನೃತ್ಯ, ಬೀದಿ ನಾಟಕ ಹಾಗೂ ಫ್ಲ್ಯಾಶ್ಮಾಬ್ಗಳಂತಹ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಲಹೆ ನೀಡಿದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 