ಕಲಿತ ಶಾಲೆಯ ಕೀರ್ತಿ ಹೆಚ್ಚಿಸಿ: ಶ್ರೀಮಂತ ಪಾಟೀಲ
ತಾವು ಕಲಿತ ಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ..!!
ಕಾಗವಾಡ 24: ನಾನು ಕಲಿತ ಶಾಲೆಯಲ್ಲಿಯೇ ನೀವು ಕೂಡಾ ಕಲಿಯುತ್ತಿದ್ದೀರಿ. ಇಂದು ನಾನು ಈ ಮಟ್ಟಕ್ಕೆ ಬೆಳೆಯಲು ಅಲ್ಲಿಯ ಶಿಕ್ಷಕರ ಮಾರ್ಗದರ್ಶನವೇ ಕಾರಣವಾಗಿದ್ದು, ನೀವು ಕೂಡಾ ಚನ್ನಾಗಿ ಓದಿ, ಜೀವನದಲ್ಲಿ ಯಶಸ್ಸು ಸಾಧಿಸಿ, ದೊಡ್ಡ ವ್ಯಕ್ತಿಗಳಾಗಿ ಹೊರಹೊಮ್ಮಿ ಎಂದು ಅಥಣಿ ಶುಗರ್ಸ್ ಕಾರ್ಖಾನೆಯ ಅಧ್ಯಕ್ಷರು, ಮಾಜಿ ಸಚಿವರು ಹಾಗೂ ಮಾಜಿ ಶಾಸಕರಾದ ಶ್ರೀಮಂತ ಪಾಟೀಲ ಹೇಳಿದ್ದಾರೆ.
ಅವರು, ಬುಧವಾರ ದಿ. 23 ರಂದು ತಾಲೂಕಿನ ಮೋಳೆ ಗ್ರಾಮದ ಶ್ರೀ ಸಿದ್ದೇಶ್ವರ ಪ್ರೌಢ ಶಾಲೆಯ 8, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸದ ನಿಮಿತ್ತ ಕೆಂಪವಾಡದ ಅಥಣಿ ಶುಗರ್ಸ್ ಕಾರ್ಖಾನೆಯಗೆ ಭೇಟ್ಟಿ ನೀಡಿದ್ದ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ, ಮಾತನಾಡುತ್ತಿದ್ದರು. ನೀವೆಲ್ಲ ಉತ್ತಮ ಶಿಕ್ಷಣವನ್ನು ಪೂರೈಸಿ, ನಮ್ಮ ಶಾಲೆಯ ಕೀರ್ತಿ ಹೆಚ್ಚಿಸಿ ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಈ ವೇಳೆ ಯುವ ನಾಯಕರು, ಅಥಣಿ ಶುಗರ್ಸ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀನಿವಾಸ ಪಾಟೀಲ ವಿದ್ಯಾರ್ಥಿಗಳೊಂದಿಗೆ ಶಿಕ್ಷಣದ ಕುರಿತು ಚರ್ಚಿಸಿದರು.
ಈ ವೇಳೆ ಪ್ರಾಚಾರ್ಯರು ಮಾತನಾಡಿ, ತಾತ್ಯಾ ಅವರು ಸಹ ನಮ್ಮ ಶ್ರೀ ಸಿದ್ದೇಶ್ವರ ಪ್ರೌಢ ಶಾಲೆಯಲ್ಲಿ ಶಿಕ್ಷಣವನ್ನು ಪಡೆದು, ಇವತ್ತು ಒಂದು ದೊಡ್ಡ ಕೈಗಾರಿಕಾ ಸಂಸ್ಥೆಯನ್ನು ಸ್ಥಾಪಿಸಿ, ಸಾವಿರಾರು ಬಡ ಜನರಿಗೆ ಉದ್ಯೋಗವನ್ನು ನೀಡುವ ಮೂಲಕ ಹಾಗೂ ಶೈಕ್ಷಣಿಕ, ರಾಜಕೀಯವಾಗಿ ಸಮಾಜ ಸೇವೆಯಲ್ಲಿ ತೊಡಗಿ ಎಲ್ಲರಿಗೂ ಮಾದರಿಯಾಗಿದ್ದಾರೆ. ನಮ್ಮ ಶಾಲೆಯ ವಿದ್ಯಾರ್ಥಿಯು ಇಂತಹ ಒಂದು ದೊಡ್ಡ ಸಾಧನೆ ಮಾಡಿದ್ದು ನಮ್ಮೇಲರಿಗೂ ಹೆಮ್ಮೆಯ ಸಂಗತಿ ಎಂದರು.
ಈ ಸಮಯದಲ್ಲಿ ಸ್ಥಳೀಯ ಮುಖಂಡರು, ಪ್ರಾಚಾರ್ಯರು, ಶಿಕ್ಷಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.