ಮಾನವ- ವನ್ಯಜೀವಿಗಳ ಸಂಘರ್ಷ ತಡೆಗೆ ಸಮನ್ವಯತೆ ಅಗತ್ಯ: ಡಾ.ಕೆ.ಎನ್ ಬಸವರಾಜ
Coordination is necessary to prevent human-wildlife conflict: Dr. K.N. Basavaraj
ಬಳ್ಳಾರಿ ಡಿ.15 : ಅರಣ್ಯ ಇಲಾಖೆ ಹಾಗೂ ಪಶು ಸಂಗೋಪನೆ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಮಾನವ- ವನ್ಯಜೀವಿಗಳ ಸಂಘರ್ಷ ತಡೆಗಟ್ಟಬಹುದಾಗಿದೆ ಎಂದು ಬಳ್ಳಾರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್.ಬಸವರಾಜ್ ಅವರು ಹೇಳಿದರು.
ಅರಣ್ಯ ಇಲಾಖೆ ವತಿಯಿಂದ ವನ್ಯಜೀವಿ ಕಾಯ್ದೆ ಹಾಗೂ ಅಪರಾಧಗಳ ವೈಜ್ಞಾನಿಕ ತನಿಖೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಬಳ್ಳಾರಿ ಪ್ರಾದೇಶಿಕ ವಿಭಾಗದ ಅರಣ್ಯ ಅಧಿಕಾರಿ ಸಿಬ್ಬಂದಿಗಳು ಹಾಗೂ ಪಶು ಸಂಗೋಪನೆ ಇಲಾಖೆಯ ಪಶು ವೈದ್ಯಾಧಿಕಾರಿಗಳಿಗೆ ಸಂಡೂರಿನ ಗುರುಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಒಂದು ದಿನದ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಾಗಾರದಲ್ಲಿ ಕರ್ನಾಟಕ ಅರಣ್ಯ ಕಾಯ್ದೆ, ಮಾಹಿತಿ ಹಕ್ಕು ಕಾಯ್ದೆ ಹಾಗೂ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸೇವಾ ನಿಯಮಗಳ ಬಗ್ಗೆಯೂ ಮಾಹಿತಿ ನೀಡಲಾಯಿತು.
ವನ್ಯಜೀವಿ ಅಪರಾಧ ನಿಯಂತ್ರಣ ಬ್ಯೂರೋದ ಸಹಾಯಕ ನಿರ್ದೇಶಕ ಶೇಷಾದ್ರಿ, ಆರೋಗ್ಯ ಇಲಾಖೆಯ ಸೂಪರಿಂಟೆಂಡೆಂಟ್ ವೆಂಕಟೇಶ್, ಮತ್ತು ನಿವೃತ್ತ ಡಿಸಿಎಫ್ ಸಿಎಂ ಅಮ್ಮಣ್ಣವರ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಪಶುಸಂಗೋಪನೆಯ ಇಲಾಖೆಯ ಉಪನಿರ್ದೇಶಕ ಡಾ.ಎಸ್ ಉಪ್ಪಾರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶರಣ್ ಕುಮಾರ್ ಸೇರಿದಂತೆ ಅರಣ್ಯ ಇಲಾಖೆ ಮತ್ತು ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 