ಹೂವಿನ ಹಡಗಲಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಆರೋಪ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಆರೋಪ

ಹೂವಿನಹಡಗಲಿ 14: ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಹಗರಣಗಳ ಸುಳಿಯಲ್ಲೇ ಸರ್ಕಾರ ಸಿಕ್ಕಿಕೊಂಡಿದೆ. ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ  ಸಚಿವ ನಾಗೇಂದ್ರ  187  ಕೋಟಿ ರೂ. ಭ್ರಷ್ಟಾಚಾರ ಮಾಡಿದ್ದಾರೆ ಎಂದು ಬಿಜೆಪಿ ಜಿಲ್ಲಾದ್ಯಕ್ಷ ಸಂಜೀವರೆಡ್ಡಿ ಆರೋಪಿಸಿದರು. ಪಟ್ಟಣದ ಪತ್ರಿಕಾ ಭವನದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಪಂಚ ಗ್ಯಾರಂಟಿ ನೀಡಿ ರಾಜ್ಯದಲ್ಲಿ ಅಭಿವೃದ್ಧಿ ಇಲ್ಲದೇ ಎಲ್ಲಾ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದ ಅವರು ಸಮಾಜವಾದಿ ಎಂದು ಹೇಳುವ ಸಿಎಂ.ಸಿದ್ದರಾಮಮಯ್ಯ ನವರು ಮೂಡಾ ಹಗರಣದಲ್ಲಿ ಸಿಲುಕಿ ನಿವೇಶನ ವಾಪಾಸು ಮಾಡಿದ್ದಾರೆ ಜತೆಗೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟ ದೆ ಎಂದು  ಟೀಕಿಸಿದರು. ಬಿಜೆಪಿ ಮಂಡಲ ಅದ್ಯಕ್ಷ ಪೂಜಾರ ಮಲ್ಲಿಕಾರ್ಜುನ, ಮಾಜಿ ಅದ್ಯಕ್ಷ ಹಣ್ಣಿ ಶಶಿಧರ,ವಕಿಲರಾದ ಮಂಜುನಾಥ ಜ್ಯೆನ್ ಇದ್ದರು. 


ಸುದ್ದಿ ಓದಿ