ಸ್ನಾನಕ್ಕೆ ನದಿಗೆ ಹೋದ ವ್ಯಕ್ತಿಯ ಮೇಲೆ ಮೊಸಳೆ ದಾಳಿ: ಗಂಭೀರ ಗಾಯ
Crocodile attacks man who went to bathe in river, seriously injured
ಸ್ನಾನಕ್ಕೆ ನದಿಗೆ ಹೋದ ವ್ಯಕ್ತಿಯ ಮೇಲೆ ಮೊಸಳೆ ದಾಳಿ: ಗಂಭೀರ ಗಾಯ
ಜಮಖಂಡಿ 29: ತಾಲೂಕಿನ ಕಡಕೋಳ ಗ್ರಾಮದಲ್ಲಿ ಮೊಸಳೆಯೊಂದು ನದಿ ಸ್ನಾನಕ್ಕೆಂದು ಹೋದ ವ್ಯಕ್ತಿಯ ಮೇಲೆ ದಾಳಿ ಮಾಡಿದ್ದು. ವ್ಯಕ್ತಿಯ ಕಾಲಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ.
ಕಡಕೋಳ ಗ್ರಾಮದ ನಿವಾಸಿ ಲಕ್ಷ್ಮಣ ದುರ್ಗಪ್ಪ ಮಾದರ (51) ಗಾಯಗೊಂಡ ವ್ಯಕ್ತಿ. ಎಂದಿನಂತೆ ಲಕ್ಷ್ಮಣ ಸ್ನಾನಕ್ಕೆಂದು ನದಿಗೆ ತೆರಳಿದ್ದಾರೆ ಎನ್ನಲಾಗಿದೆ. ನದಿಯಲ್ಲಿ ಇಳಿಯುತ್ತಲೇ ಮೊಸಳೆ ಬಂದು ಕಾಲು ಹಿಡಿದಿದೆ. ಜೋರಾಗಿ ಕಿರುಚಾಡಿ ಮೊಸಳೆಯ ಹಿಡಿತದಿಂದ ತಪ್ಪಿಸಿಕೊಂಡು ಪಾರಾಗಿ ದಡ ಸೇರಿದ್ದಾರೆ. ಮೊಸಳೆ ಬಲಗಾಲಿಗೆ ಜೋರಾಗಿ ಕಚ್ಚಿದ್ದು ಸಾಕಷ್ಟು ರಕ್ತಸ್ರಾವವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕೂಡಲೇ ಸ್ಥಳಿಯರು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಪರಿಣಾಮ ಸುಮಾರು 2 ಲಕ್ಷ ಕ್ಯುಸೆಕ್ಸ್ ನೀರು ಹರಿದು ಬರುತ್ತಿದ್ದು, ನೀರಿನೊಂದಿಗೆ ಮೊಸಳೆಗಳು ಸೇರಿದಂತೆ ಅನೇಕ ಜಲಚರ ಪ್ರಾಣಿಗಳು ಬರುತ್ತಿವೆ. ಇದರಿಂದ ಸಾರ್ವಜನಿಕರು ಎಚ್ಚರದಿಂದ ಇರುವಂತೆ ತಾಲೂಕು ಆಡಳಿತ ಮನವಿ ಮಾಡಿದೆ. ಪೊಲೀಸ್ ಸಿಬ್ಬಂದಿ, ಗ್ರಾಮಲೆಕ್ಕಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಗ್ರಾಪಂ ಅಧ್ಯಕ್ಷ ದೇವರವರ ಸರ್ಕಾರ ಪರಿಹಾರ ನೀಡುವಂತೆ ಮನವಿ ಮಾಡಿದ್ದಾರೆ. ಮೊಸಳೆ ದಾಳಿಯಿಂದ ಗಾಯಗೊಂಡ ವ್ಯಕ್ತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಹರಾಷ್ಟ್ರದ ಮಿರಜ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 