ಜಿಲ್ಲೆಯ ರೈತರಿಗೆ ರೂ.28.84 ಕೋಟಿ ಬೆಳೆಹಾನಿ ಪರಿಹಾರ
Crop damage compensation of Rs. 28.84 crore to farmers in the district
ಹಾವೇರಿ 27 : ಪ್ರಸಕ್ತ ಸಾಲಿನಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆಹಾನಿಗೆ ಜಿಲ್ಲೆಯ ರೈತರಿಗೆ ರೂ.28.84 ಕೋಟಿ ಬೆಳೆಹಾನಿ ಪರಿಹಾರ ಮಂಜೂರು ಮಾಡಲಾಗಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ 16,801 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, ಎಸ್.ಡಿ.ಆರ್‌ಎಫ್ ಮಾರ್ಗಸೂಚಿ ಅನ್ವಯ ಈಗಾಗಲೇ 33,726 ರೈತರಿಗೆ ರೂ.14.66 ಕೋಟಿ ಡಿಬಿಟಿ ಮೂಲಕ ಜಮೆ ಮಾಡಲಾಗಿತ್ತು. ಇಂದು ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರು ಹೆಚ್ಚುವರಿಯಾಗಿ ಪ್ರತಿ ಹೆಕ್ಟೇರಗೆ ರೂ.8,500 ರಂತೆ ಜಿಲ್ಲೆಯ 33,725 ರೈತರ ಖಾತೆಗೆ ರೂ.14.18 ಕೋಟಿ ಬೆಳೆಹಾನಿ ಪರಿಹಾರ ಜಮೆಗೆ ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.
ಮಳೆಯಾಶ್ರಿತ, ನೀರಾವರಿ ಹಾಗೂ ತೋಟಗಾರಿಕೆ ಬೆಳೆಗಳ ಹಾನಿ ಜಂಟಿ ಸಮೀಕ್ಷೆಯನ್ನು ಜಿಲ್ಲಾಡಳಿತ ಅತ್ಯಂತ ಮುತುವರ್ಜಿಯಿಂದ ಮಾಡಿದ್ದು, ಜಿಲ್ಲೆಯ ರೈತರಿಗೆ ಸೂಕ್ತ ಪರಿಹಾರ ಕೊಡಿಸಲು ಉತ್ತಮವಾಗಿ ಕೆಲಸಮಾಡಿದ್ದಾರೆ ಎಂದರು.
ಮಾನ್ಯ ಮುಖ್ಯಮಂತ್ರಿಗಳು ಎಸ್.ಡಿ.ಆರ್‌ಎಫ್ ಹೊರತಾಗಿ ಪ್ರತಿ ಹೆಕ್ಟೇರಗೆ ರೂ.8,500 ರಂತೆ ಹೆಚ್ಚುವರಿಯಾಗಿ ಪರಿಹಾರ ನೀಡಿದ್ದು, ರಾಜ್ಯದ 27 ಜಿಲ್ಲೆಗಳಿಗೆ ರೂ.1,033 ಕೋಟಿ ಬೆಳೆಹಾನಿ ಪರಿಹಾರ ಮಂಜೂರು ಮಾಡಿದ್ದಾರೆ ಎಂದು ತಿಳಿಸಿದರು.
ಮೆಕ್ಕೆಜೋಳ ಬೆಂಬಲ ನಿಗದಿ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆಯಾಗಿದ್ದು, ಮೆಕ್ಕೆಜೋಳ, ಕಬ್ಬು ಹಾಗೂ ಭತ್ತವನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಾಗಿದೆ. ಬೆಂಬಲ ಬೆಲೆ ನಿಗದಿಪಡಿಸಿರುವುದು ಕೇಂದ್ರ ಸರ್ಕಾರದ ಕೆಲಸವಾಗಿದೆ, ಅದನ್ನು ಕಾಲಕಾಲಕ್ಕೆ ಅವರು ಮಾಡಬೇಕು ಹಾಗೂ ಅವರು ಹೇಳಿದ ಕೆಲಸಮಾಡಲು ನಾವು ತಯಾರಿದ್ದೇವೆ. ರೈತರ ವಿಷಯದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದರು.
ಮಾಧ್ಯಮಗೋಷ್ಠಿಯಲ್ಲಿ ಶಾಸಕರು ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರ್ಪ ಮಾನಪ್ಪ ಲಮಾಣಿ, ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್ ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 