ಧಾರವಾಡ - ಹುಬ್ಬಳ್ಳಿ

ಸಿಲಿಂಡರ್ ಸ್ಫೋಟ ಘಟನೆ; ಗಾಯಾಳುಗಳ ಆರೋಗ್ಯ ವಿಚಾರಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್

ಸಿಲಿಂಡರ್ ಸ್ಫೋಟ ಘಟನೆ; ಗಾಯಾಳುಗಳ ಆರೋಗ್ಯ ವಿಚಾರಿಸಿದ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್
Cylinder explosion incident; District in-charge Minister Santosh Lad inquires about the health of t

ಹುಬ್ಬಳ್ಳಿ   5: ಇತ್ತೀಚೆಗೆ ಧಾರವಾಡ ಜನ್ನತ ನಗರದ ಮನೆಯೊಂದರಲ್ಲಿ ಆಕಸ್ಮಿಕವಾಗಿ ಸಿಲಿಂಡರ್ ಸ್ಫೋಟಗೊಂಡು ಗಾಯಗೊಂಡ ಗಾಯಾಳುಗಳನ್ನು ಇಂದು ಕರ್ನಾಟಕ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ (ಕೆಎಂಸಿಆರ್‌ಐ) ಯಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಅವರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.  

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡುಗೆ ಅನಿಲ ಸೋರಿಕೆಯಾಗಿ ಮನೆ ತುಂಬಿಕೊಂಡು ಅವಘಡ ಸಂಭವಿಸಿದೆ. ಆಫ್ರಿನ್ ಎಂಬ ಮಹಿಳೆ ಶೇ.80 ರಷ್ಟು ಸುಟ್ಟು ಹೋಗಿದ್ದಾರೆ. ಉಳಿದವರು ಬೆಂಕಿಯಿಂದ ಸುಟ್ಟು ಗಾಯಗೊಂಡಿದ್ದಾರೆ. ಅವರ ಚಿಕಿತ್ಸೆ ಕಾರ್ಯ ಮುಂದುವರೆದಿದೆ. ಚಳಿಗಾಲದಲ್ಲಿ ಅಡುಗೆ ಅನಿಲ ಸೋರಿಕೆ ಆಗುತ್ತಿದೆ. ಕಳೆದ ಬಾರಿ ಸಹ ಇದೇ ರೀತಿಯಾಗಿತ್ತು. ಈ ಬಗ್ಗೆ ಅಧ್ಯಯನ ಮಾಡಬೇಕಿದೆ. ಸಾರ್ವಜನಿಕರು ಅಡುಗೆ ಅನಿಲ ಬಳಸುವಾಗ ಎಚ್ವರಿಕೆ ವಹಿಸುವುದು ಅಗತ್ಯವಿದೆ ಎಂದರು.  

ಇದೇ ಸಂದರ್ಭದಲ್ಲಿ ಗಾಯಾಳುಗಳ ಚಿಕಿತ್ಸೆ ಕುರಿತು ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಸಚಿವರು ಗಾಯಾಳುಗಳ ಕುಟುಂಬಸ್ಥರಿಗೆ ವೈಯಕ್ತಿಕವಾಗಿ ಧನಸಹಾಯ ಮಾಡಿದರು.  ಈ ಸಂದರ್ಭದಲ್ಲಿ ಶಾಸಕರಾದ ಎನ್‌.ಎಚ್‌.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್‌.ಜೆ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಡಿಸಿಪಿ ಮಹಾನಿಂಗ ನಂದಗಾವಿ, ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಮಹೇಶ ಭಗವಂತ ಗಸ್ತೆ, ಕೆಎಂಸಿಆರ್‌ಐ ವೈದ್ಯರು, ಇತರರು ಉಪಸ್ಥಿತರಿದ್ದರು. 


ಸುದ್ದಿ ಓದಿ