ಡಿ.ಕೆ. ಶಿವಕುಮಾರಗೆ ಮಾಜಿ ಶಾಸಕ ಸುಣಗಾರ ಸನ್ಮಾನ
ತಾಳಿಕೋಟಿ: ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿಗೆ ಸದಸ್ಯರನ್ನಾಗಿ ಮಾಡಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಹಾಗೂ ದೇ. ಹಿಪ್ಪರಗಿ ಮತಕ್ಷೇತ್ರದ ಟಿಕೆಟ್ ಆಕಾಂಕ್ಷಿ ಶರಣಪ್ಪ ಸುಣಗಾರ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರನ್ನು ಸನ್ಮಾನಿಸಿ ಗೌರವಿಸಿದರು.
ಬೆಳಗಾವಿ ಅಧಿವೇಶನದ ಮುನ್ನಾ ದಿನ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಕರೆದ ಚುನಾವಣಾ ಸಮಿತಿ ಸದಸ್ಯರ ಪ್ರಥಮ ಸಭೆಯಲ್ಲಿ ಭಾಗವಹಿಸಿ ಅವರು ಸನ್ಮಾನಿಸಿ ತಮ್ಮನ್ನು ಸದಸ್ಯರನ್ನಾಗಿ ಆಯ್ಕೆ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು.
ಮಾತನಾಡಿದ ಡಿ.ಕೆ. ಶಿವಕುಮಾರ ಅವರು ರಾಜ್ಯದಲ್ಲಿ ಈ ಬಾರಿ ಪಕ್ಷಕ್ಕೆ ಅಡಳಿತದಲ್ಲಿ ಬರುವ ಎಲ್ಲ ಅವಕಾಶಗಳಿವೆ ಇದಕ್ಕಾಗಿ ನಮ್ಮೆಲ್ಲ ಕಾರ್ಯಕರ್ತರು ಸಂಘಟಿತರಾಗಿ ಶಕ್ತಿ ಮೀರಿ ಕೆಲಸ ಮಾಡುವ ಅಗತ್ಯ ಇದೆ. ಪಕ್ಷ ನಿಮ್ಮ ಅನುಭವವನ್ನು ಗುರುತಿಸಿ ಸಮಿತಿಗೆ ಆಯ್ಕೆ ಮಾಡಿದೆ. ಈ ಜವಾಬ್ದಾರಿಯನ್ನು ಚೆನ್ನಾಗಿ ನಿಭಾಯಿಸಿ ಎಂದು ಸಲಹೆ ನೀಡಿದ ಅವರು ಬಿಜೆಪಿ ರಾಜ್ಯದಲ್ಲಿ ಆಡಳಿತ ನಡೆಸಲು ಸಂಪೂರ್ಣವಾಗಿ ವಿಫಲವಾಗಿದೆ ಅದರ ವೈಫಲ್ಯಗಳನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕಾಗಿದೆ. ನಮ್ಮೆಲ್ಲ ಕಾರ್ಯಕರ್ತರು ಮನೆ-ಮನೆಗೆ ತಲುಪಿ ನಮ್ಮ ಆಡಳಿತ ಕಾಲಾವಧಿಯಲ್ಲಾದ ಜನಪರ ಕಾರ್ಯಗಳನ್ನು ತಿಳಿಸುವ ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷ ಮಾತ್ರ ರಾಜ್ಯಕ್ಕೆ ಉತ್ತಮ ಆಯ್ಕೆಯಾಗಿದೆ ಎಂದು ಜನರಿಗೆ ಮನವರಿಕೆ ಮಾಡಿ ಎಂದು ಹೇಳಿದರು.
ಈ ಸಮಯದಲ್ಲಿ ದೇ.ಹಿಪ್ಪರಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಶೀರ ಸೇಠ ಬೇಪಾರಿ ಇದ್ದರು.