ಮನರಂಜನೆ

ಕೊರೋನಾ : ಡಾರ್ಲಿಂಗ್ ಕೃಷ್ಣ, ಮಿಲನ ನಾಗರಾಜ್ ದಂಪತಿಗೆ ಸೋಂಕು

ಕೊರೋನಾ : ಡಾರ್ಲಿಂಗ್ ಕೃಷ್ಣ, ಮಿಲನ ನಾಗರಾಜ್ ದಂಪತಿಗೆ ಸೋಂಕು

ಬೆಂಗಳೂರು, ಏಪ್ರಿಲ್ 14:ಸ್ಯಾಂಡಲ್ ವುಡ್ ನಟ ಡಾರ್ಲಿಂಗ್ ಕೃಷ್ಣ ಮತ್ತು ಪತ್ನಿ ಮಿಲನ ನಾಗರಾಜ್ ದಂಪತಿಗೆ ಕೊರೋನಾ ವೈರಸ್ ಸೋಂಕು ತಗುಲಿದೆ. ಈ ಕುರಿತು ಡಾರ್ಲಿಂಗ್ ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ನೀಡಿದ್ದು, ''ನನಗೆ ಮತ್ತು ನನ್ನ ಪತ್ನಿಗೆ ಕೋವಿಡ್ ತಗುಲಿದೆ. 'ನಮ್ಮ ಸಂಪರ್ಕಕ್ಕೆ ಬಂದಿದ್ದವರು ದಯವಿಟ್ಟು ಪರೀಕ್ಷಿಸಿಕೊಳ್ಳಿ'' ಎಂದು ಮನವಿ ಮಾಡಿದ್ದಾರೆ. ಒಂದು ವಾರದ ಹಿಂದೆ ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ನಾಗರಾಜ್ ಅವರು ಗೋವಾದಲ್ಲಿದ್ದರು. ಗೋವಾದಲ್ಲಿ ಕೃಷ್ಣ ನಟನೆಯ 'ಶುಗರ್ ಫ್ಯಾಕ್ಟರಿ' ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ವೇಳೆ ಮಿಲನ ನಾಗರಾಜ್ ಸಹ ಗೋವಾಗೆ ಭೇಟಿ ನೀಡಿದ್ದರು. ಫೆಬ್ರವರಿ 14 ರಂದು ಪ್ರೇಮಿಗಳ ದಿನದ ವಿಶೇಷವಾಗಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನ ವಿವಾಹವಾಗಿದ್ದರು. ನಂತರ ಹನಿಮೂನ್‌ಗಾಗಿ ಮಾಲ್ಡೀವ್ಸ್‌ಗೆ ತೆರೆಳಿದ್ದರು. ಅಲ್ಲಿಂದ ವಾಪಸ್ ಬಂದ ನಂತರ ಸಿನಿಮಾಗಳಲ್ಲಿ ತೊಡಗಿಕೊಂಡಿದ್ದರು.ಕೊರೋನಾ ಸೋಂಕಿನಿಂದ “ದಂಪತಿ ಬೇಗನೆ ಗುಣಮುಖರಾಗುವಂತೆ ಅಭಿಮಾನಿಗಳು ಹಾರೈಸಿದ್ದಾರೆ.

  



ಸುದ್ದಿ ಓದಿ