ಬಳ್ಳಾರಿ

ಸಸಿ ನೆಡುವ ಕಾರ್ಯಕ್ರಮಕ್ಕೆ ಡಿಸಿ ಅನಿರುದ್ಧ್ ಶ್ರವಣ್ ಚಾಲನೆ

ಸಸಿ ನೆಡುವ ಕಾರ್ಯಕ್ರಮಕ್ಕೆ ಡಿಸಿ ಅನಿರುದ್ಧ್ ಶ್ರವಣ್ ಚಾಲನೆ

ವಿಜಯನಗರ(ಹೊಸಪೇಟೆ)05: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅರಣ್ಯ ಇಲಾಖೆ, ಹೊಸಪೇಟೆ ನಗರಸಭೆ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಹೊಸಪೇಟೆ ನಗರದ ಜಂಭುನಾಥ್ ರಸ್ತೆಯ ಕ್ಯಾನಲ್ ಬಳಿಯ ಬಾಲಾಂಜನೇಯ ದೇವಸ್ಥಾನದ ಹತ್ತಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಅವರು ಚಾಲನೆ ನೀಡಿದರು.

ವಿವಿಧ ಸಂಘ-ಸಂಸ್ಥೆಗಳ ಜೊತೆಗೆ ನಗರದ ವಿವಿಧೆಡೆ ಸಸಿಗಳನ್ನು ನೆಡಲಾಗುತ್ತಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ಎಲ್ಲರಿಗೂ ವಿಶ್ವ ಪರಿಸರ ದಿನಾಚರಣೆಯ ಶುಭಶಯಗಳನ್ನು ತಿಳಿಸಿದರು.

ಹೊಸಪೇಟೆ ನಗರದಲ್ಲಿ ಹಲವು ಕಡೆಗಳಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,ಇಂದು ಬಾಲಾಂಜನೇಯ ದೇವಸ್ಥಾನದ ಹತ್ತಿರ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಈ ವಾರದಲ್ಲಿ ಇನ್ನೂ ಬೇರೆ ಬೇರೆ ಕಡೆಗಳಲ್ಲಿ ಅರಣ್ಯ ಇಲಾಖೆಯ ವತಿಯಿಂದ ಸಸಿ ನೆಡುವ ಯೋಜನೆ ಇದ್ದು, ವಿಜಯನಗರ ಜಿಲ್ಲೆಯ ನಗರ ಮತ್ತು ಗ್ರಾಮೀಣ ಭಾಗಳಲ್ಲಿ ಸಸಿ ನೆಡುವ ಕಾರ್ಯ ಆಗುತ್ತಿದ್ದು ಮುಂದಿನ ಮಳೆಗಾಲದಲ್ಲಿ ಸಸಿಗಳಿಗೆ ರಕ್ಷಣೆಯನ್ನು ಒದಗಿಸಿದಂತೆ ಆಗುತ್ತದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆಯ ಅಧ್ಯಕ್ಷೆ ಸುಂಕಮ್ಮ, ಉಪಾಧ್ಯಕ್ಷ ಆನಂದ್, ನಗರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ತಾರಿಹಳ್ಳಿ ಜಂಭುನಾಥ್,ಎಸ್ಪಿ ಡಾ.ಅರುಣ್ ಕುಮಾರ್, ಸಹಾಯಕ ಆಯುಕ್ತ ಸಿದ್ದರಾಮೇಶ್ವರ, ತಹಶೀಲ್ದಾರ್ ವಿಶ್ವಜೀತ ಮೇಹತಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್, ವಲಯ ಅರಣ್ಯ ಅಧಿಕಾರಿ ಕೆ.ಸಿ.ವಿನಯ್ ಕುಮಾರ್, ಉಪ ವಲಯ ಅರಣ್ಯ ಅಧಿಕಾರಿ ಶಿವುಕುಮಾರ್ , ನಗರಸಭೆಯ ಪೌರಯುಕ್ತ ರಮೇಶ್, ಸಚಿವರ ಆಪ್ತ ಸಹಾಯಕ ಧಮೇರ್ಂದ್ರ ಸಿಂಗ್,ಅರಣ್ಯ ಇಲಾಖೆಯ ಸಿಬ್ಬಂದಿಗಳು ಹಾಗೂ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಇದ್ದರು.

--

ಸುದ್ದಿ ಓದಿ