ಡಿಜಿಪಿ ರಾಮಚಂದ್ರ ರಾವ್ ಅಮಾನತು
DGP Ramachandra Rao suspended
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಹುದ್ದೆಯಲ್ಲಿದ್ದುಕೊಂಡು, ಕಚೇರಿಯಲ್ಲೇ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪ ಎದುರಿಸುತ್ತಿರುವ ರಾಜ್ಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಕೆ. ರಾಮಚಂದ್ರ ರಾವ್ ಅವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಸೋಮವಾರ ಸಾಮಾಜಿಕ ಜಾಲತಾಣಗಳಲ್ಲಿ ಡಿಜಿಪಿ ರಾಮಚಂದ್ರ ರಾವ್ ಅವರದ್ದು ಎನ್ನಲಾದ ಆಕ್ಷೇಪಾರ್ಹ ವಿಡಿಯೋಗಳು ಮತ್ತು ಆಡಿಯೋ ಕ್ಲಿಪ್ಗಳು ಭಾರಿ ಸಂಚಲನ ಮೂಡಿಸಿದ್ದವು. ಈ ಬೆಳವಣಿಗೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಧಿಕಾರಿ ಎಷ್ಟೇ ಪ್ರಭಾವಿಯಾಗಿದ್ದರೂ ಶಿಸ್ತು ಕ್ರಮ ಅನಿವಾರ್ಯ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಸೋಮವಾರ ತಡರಾತ್ರಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಅಮಾನತು ಆದೇಶ ಹೊರಡಿಸಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಸುಮಾರು 47 ಸೆಕೆಂಡಿನ ವೈರಲ್ ವಿಡಿಯೋದಲ್ಲಿ ಡಿಜಿಪಿ ರಾಮಚಂದ್ರ ರಾವ್ ಮಹಿಳೆಯರಿಗೆ ಮುತ್ತುಕೊಡುವುದು, ತಬ್ಬಿಕೊಳ್ಳುವುದು ಸೇರಿ ಅಸಭ್ಯವಾಗಿ ವರ್ತಿಸಿದ್ದಾರೆ. ವಿಡಿಯೋದಲ್ಲಿ ನಾಲ್ವರು ಮಹಿಳೆಯರು ಇದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಒಬ್ಬಳೇ ಮಹಿಳೆ ಬೇರೆ ಬೇರೆ ಉಡುಪಿನಲ್ಲಿ ಇದ್ದಾಳೆ ಎನ್ನಲಾಗಿದೆ. ಇನ್ನು ರಾಮಚಂದ್ರರಾವ್ ತಮ್ಮ ಇಲಾಖೆ ಹಾಗೂ ಕಚೇರಿಯ ಮಹಿಳಾ ಅಧಿಕಾರಿ-ಸಿಬ್ಬಂದಿಯನ್ನೇ ದುರುಪಯೋಗ ಪಡಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಡಿಜಿಪಿ ಸಮರ್ಥನೆ: ಈ ನಡುವೆ ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿರುವ ರಾಮಚಂದ್ರ ರಾವ್, "ಇದೆಲ್ಲವೂ ಫ್ಯಾಬ್ರಿಕೇಟೆಡ್ (ಸೃಷ್ಟಿಸಿದ) ವಿಡಿಯೋಗಳು. ನನ್ನ ಘನತೆಗೆ ಧಕ್ಕೆ ತರಲು ಎಐ (AI) ತಂತ್ರಜ್ಞಾನ ಬಳಸಿ ಇಂತಹ ಕೃತ್ಯ ಎಸಗಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 