ಚೋರನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಹೆಚ್‌ಓ ಭೇಟಿ-ಪರೀಶೀಲನೆ
DHO visits and inspects Choranur Primary Health Center
ಚೋರನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಡಿಹೆಚ್‌ಓ ಭೇಟಿ-ಪರೀಶೀಲನೆ
ಬಳ್ಳಾರಿ 08: ಗರ್ಭಾವಸ್ಥೆಯ ಅವಧಿಯಲ್ಲಿ ಮನೆಯಲ್ಲಿನ ಗರ್ಭಿಣಿ ಮಹಿಳೆಯರಿಗೆ ಸ್ವ-ಆರೈಕೆಯ ಕುರಿತು ಸಲಹೆ ಮತ್ತು ಸೂಕ್ತ ಸಂವಹನ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಸಂಡೂರು ತಾಲ್ಲೂಕಿನ ಚೋರನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಪ್ರಗತಿ ಪರೀಶೀಲನೆ ನಡೆಸಿ ಅವರು ಮಾತನಾಡಿದರು.ತೊಡಕಿನ ಗರ್ಭಿಣಿಯರಿಗೆ ಪ್ರತಿ ತಿಂಗಳು 9ನೇ ತಾರೀಖಿನಂದು ನಡೆಯುವ ಪ್ರಧಾನ ಮಂತ್ರಿ ಸುರಕ್ಷ ಮಾತೃತ್ವ ಅಭಿಯಾನ ದಿನದಂದು ವೈದ್ಯಾಧಿಕಾರಿಗಳ ಹತ್ತಿರ ಆರೋಗ್ಯ ತಪಾಸಣೆ ಮಾಡಿಸಲು ಕಾಳಜಿ ವಹಿಸಬೇಕು ಎಂದು ತಿಳಿಸಿದರು.
ಪ್ರಸವಪೂರ್ವ ಆರೈಕೆಯಲ್ಲಿ ವೈದ್ಯಕೀಯ ಪರೀಕ್ಷೆ, ವೈದ್ಯರ ಸಲಹೆ ಮತ್ತು ಆರೋಗ್ಯ ಶಿಕ್ಷಣ ನೀಡುವ ಅವಶ್ಯಕತೆ ಇದ್ದು, ಹೆರಿಗೆಯ ಸಮಯದಲ್ಲಿ ಮತ್ತು ನಂತರ ಆರೈಕೆಯ ಬೆಂಬಲ ನೀಡಬೇಕು ಎಂದರು.ಗರ್ಭಿಣಿಯರಿಗೆ ಯಾವುದೇ ಸಮಸ್ಯೆಗಳು ಇಲ್ಲದಿದ್ದರೂ ಸಹ ಗರ್ಭಾವಸ್ಥೆಯಲ್ಲಿ ಕನಿಷ್ಟ 4 ಬಾರಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆರೋಗ್ಯ ತಪಾಸಣೆಯ ಜೊತೆಗೆ ವೈದ್ಯರ ಸಲಹೆಯಂತೆ ರಕ್ತ ಪರೀಕ್ಷೆ ಮಾಡಿಸಲು ತಿಳಿಸಬೇಕು. ಗರ್ಭಾವಸ್ಥೆಯಲ್ಲಿನ ಅಪಾಯದ ಚಿಹ್ನೆಗಳ ಬಗ್ಗೆ ತಾಯಂದಿರಿಗೆ ಅರಿವು ಮೂಡಿಸಬೇಕು. ವೈದ್ಯರ ಸಲಹೆ ಇಲ್ಲದೇ ಯಾವುದೇ ಓಷಧಿಗಳನ್ನು ತೆಗೆದುಕೊಳ್ಳಬಾರದು ಎಂದು ಸಲಹೆ ನೀಡಬೇಕು ಎಂದು ಡಿಹೆಚ್‌ಓ ಅವರು ತಿಳಿಸಿದರು.ಮಳೆಗಾಲ ಆರಂಭದ ಹಿನ್ನಲೆಯಲ್ಲಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ಸ್ವಚ್ಛತೆ ಕಾಪಾಡಿಕೊಳ್ಳಲು ಸೂಚಿಸಬೇಕು. ನಿಂತ ನೀರಿನಲ್ಲಿ ಸೊಳ್ಳೆಗಳ ಉತ್ಪತ್ತಿಯಿಂದ ಡೆಂಗ್ಯೂ, ಚಿಕುನ್‌ಗುನ್ಯಾ ಕಾಯಿಲೆಗಳು ಹರಡುವ ಸಾಧ್ಯತೆ ಇದ್ದು,
ಈ ಕುರಿತು ಸಾರ್ವಜನಿಕ ಸಮುದಾಯದಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಬೇಕು ಎಂದು ತಿಳಿಸಿದರು.ತಾಯಿಯ ಎದೆ ಹಾಲು ಮಗುವಿಗೆ ಅಮೃತ. ಮಗುವಿಗೆ 6 ತಿಂಗಳವರೆಗೆ ತಾಯಿಯ ಹಾಲನ್ನೇ ಕೊಡಲು ಸೂಚಿಸಬೇಕು. ಆರು ತಿಂಗಳ ನಂತರ ತಾಯಿ ಹಾಲಿನ ಜೊತೆಗೆ ಪೂರಕ ಆಹಾರ ನೀಡಲು ತಿಳಿಸಬೇಕು. ಎಲ್ಲಾ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಉಚಿತವಾಗಿ ಮಾರಕ ರೋಗಗಳ ವಿರುದ್ಧದ ಲಸಿಕೆಗಳನ್ನು ನೀಡಲಾಗುತ್ತಿದ್ದು, ಮಕ್ಕಳಿಗೆ ನಿಗಧಿತ ಸಮಯದಲ್ಲಿ ಎಲ್ಲಾ ಲಸಿಕೆಗಳನ್ನು ತಪ್ಪದೇ ಹಾಕಿಸುವಂತೆ ಪೋಷಕರಲ್ಲಿ ಮನವರಿಕೆ ಮಾಡಿಕೊಡಬೇಕು ಎಂದು ಹೇಳಿದರು.
ಬಳಿಕ ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು ಅವರು ನಂತರ ಪ್ರಯೋಗಾಲಯ, ಐಎಲ್‌ಆರ್ ಕೊಠಡಿ ನಂತರ ವಾರ್ಡ್‌ಗಳಿಗೆ ಭೇಟಿ ನೀಡಿ ಸ್ವಚ್ಛತೆ ಕುರಿತು ಪರೀಶೀಲಿಸಿದರು. ನಂತರ ಸಾರ್ವಜನಿಕರ ಜೊತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿ ಸೌಲಭ್ಯ ಪಡೆದುಕೊಳ್ಳಲು ತಿಳಿಸಿದರು.ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ.ಅಕ್ಷಯ್, ಡಿಎನ್‌ಒ ಗೀರೀಶ್, ಹಿರಿಯ ಆರೋಗ್ಯ ನೀರೀಕ್ಷಣಾಧಿಕಾರಿ ಡೊಣೇಶ್ವರ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ, ಆರೋಗ್ಯ ನೀರೀಕ್ಷಣಾಧಿಕಾರಿ, ಆಶಾಕಾರ್ಯಕರ್ತೆಯರು ಸೇರಿದಂತೆ ತಾಯಂದಿರು, ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 