ಕೋಮುಸಾಮರಸ್ಯ ಕದಡುವವರ ವಿರುದ್ಧ ಕ್ರಮಕ್ಕೆ ಡಿಎಸ್ಎಸ್ ಆಗ್ರಹ
DSS demands action against those disrupting communal harmony
ಬಳ್ಳಾರಿ, ಸೆ. 23: ಮೈಸೂರು ಜಿಲ್ಲೆಯ ಟಿ. ನರಸೀಪುರ ಪಟ್ಟಣದಲ್ಲಿ ಗಣೇಶೋತ್ಸವಕ್ಕೆ ಸಂಬಂಧಿಸಿದ ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ನೀಡಿದ ಹೇಳಿಕೆಯನ್ನು ಬಳಸಿಕೊಂಡು ರಾಜ್ಯದಲ್ಲಿ ಕೋಮು ಸಾಮರಸ್ಯ ಕದಡಲು ಪ್ರಯತ್ನಿಸಲಾಗುತ್ತಿದೆ.
ಇಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಬೇಕು ಎಂದು ದಲಿತ ಸಂಘರ್ಷ ಸಮಿತಿ (ಭೀಮಮಾರ್ಗ) ಮುಖಂಡ ಬಂಡಿಹಟ್ಟಿ ಗಾದಿಲಿಂಗ ಒತ್ತಾಯಿಸಿದರು.
ಈ ಕುರಿತು ಬಳ್ಳಾರಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ಅವರು, ಟಿ. ನರಸೀಪುರ ಸೇರಿದಂತೆ ವಿವಿಧೆಡೆ ಕೋಮು ಸೌಹಾರ್ದತೆ ಕದಡುವ ಪ್ರಯತ್ನಗಳನ್ನು ಖಂಡಿಸಿ ಡಿಎಸ್ಎಸ್ ಸೇರಿದಂತೆ ಹಲವು ದಲಿತ ಸಂಘಟನೆಗಳು ಶಾಂತಿಯುತ ಹೋರಾಟ ನಡೆಸಿವೆ ಎಂದು ತಿಳಿಸಿದರು.
ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳು ಹಾಗೂ ಕೃತಿಗಳ ಕುರಿತು ತಪ್ಪು ತಿಳುವಳಿಕೆ ಮೂಡಿಸಿ ಸಮಾಜದ ಶಾಂತಿಗೆ ಭಂಗ ತರುವ ಮತ್ತು ಸಹೋದರತ್ವಕ್ಕೆ ಧಕ್ಕೆ ಉಂಟುಮಾಡುವ ಪ್ರಯತ್ನಗಳನ್ನು ತಡೆಯಬೇಕು ಎಂದು ಆಗ್ರಹಿಸಿದರು.
ಗಣೇಶೋತ್ಸವ ಮೆರವಣಿಗೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸ್ವಯಂಪ್ರೇರಿತ ದೂರು ದಾಖಲಿಸಿರುವುದು ಸ್ವಾಗತಾರ್ಹ. ಆದರೆ, ಎಫ್ಐಆರ್ ದಾಖಲಾದ ಬಳಿಕವೂ ಆರೋಪಿಯನ್ನು ಬಂಧಿಸದೆ.
ಇರುವುದರಿಂದ ಕಾನೂನು ಉಲ್ಲಂಘನೆಗೆ ಉತ್ತೇಜನ ನೀಡಿದಂತಾಗುತ್ತದೆ. ಆದ್ದರಿಂದ ಪ್ರತಾಪಸಿಂಹ ಅವರನ್ನು ಬಂಧಿಸಿ, ರಾಜ್ಯದಿಂದ ಗಡಿಪಾರು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಗಾದಿಲಿಂಗ ಒತ್ತಾಯಿಸಿದರು.
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ 