ಸಾಲ ಮನ್ನಾ ಮಾಡುವ ಬಗ್ಗೆ ಚಳಿಗಾಲದ ಆದಿವೇಶನದಲ್ಲಿ ಚರ್ಚೆ
Debate on loan waiver at winter session
ರಾಣೇಬೆನ್ನೂರು 17 : ಹಾವೇರಿ ಜಿಲ್ಲೆಯಾದ್ಯಂತ ಕೆಲವು ಖಾಸಗಿ ಫೈನಾನ್ಸ್ಗಳು ರೈತ ಕಾರ್ಮಿಕರು, ಕೂಲಿ ಕಾರ್ಮಿಕರು, ಮಧ್ಯಮ ವರ್ಗದ ಬಡವರಿಗೆ ಕಿರುಕುಳ ಕೊಡುತ್ತಿರುವುದು ಇನ್ನೂ ಕೂಡ ನಿಂತಿಲ್ಲ ಮತ್ತು ಮೈಕ್ರೋ ಫೈನಾನ್ಸ್ಗಳಲ್ಲಿ 1 ಲಕ್ಷಕ್ಕಿಂತ ಕಡಿಮೆ ಇರುವಂತಹ ಫಲಾನುಭವಿಗಳಿಗೆ ಸಾಲ ಮನ್ನಾ ಮಾಡುವ ಬಗ್ಗೆ ಚಳಿಗಾಲದ ಆದಿವೇಶನದಲ್ಲಿ ಚರ್ಚೆ ಮಾಡಿ ಅನುಮತಿ ನೀಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಹನುಮಂತಪ್ಪ ಕಂಬಾರ ಹೇಳಿದರು.
ನಗರದ ತಾಲೂಕ ತಹಶೀಲ್ದಾರ ಮೂಲಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಹಾವೇರಿ ಜಿಲ್ಲೆಯಾದ್ಯಂತ ಖಾಸಗಿ ಫೈನಾನ್ಸ್ಗಳು ನಾಯಿಕೊಡೆಯಂತೆ ಹುಟ್ಟಿಕೊಂಡಿದ್ದು ಮತ್ತು ಬೇರೆ ಜಿಲ್ಲೆಗಳಿಂದ ಬಂದು ಲೋನ್ ಕೊಟ್ಟು, ದುಪ್ಪಟ್ಟು ಬಡ್ಡಿಯನ್ನು ವಸೂಲಿ ಮಾಡುವಂತಹ ದುಂಡಾವರ್ತನೆ ಮಾಡುತ್ತಾ ಸಂಜೆಯ ವೇಳೆ 7 ಘಂಟೆಯಲ್ಲಿ ಮನೆಯ ಮುಂದೆ ಹಣ ಮತ್ತು ಅದರ ಬಡ್ಡಿಯನ್ನು ಕಟ್ಟುವಂತೆ ಮನೆಯ ಮುಂದೆ ಅವಮಾನಗೊಳಿಸುತ್ತಾ ಮನೆ ಬೀಗ ಹಾಕುತ್ತೇವೆ. ಹರಾಜು ಮಾಡುತ್ತೇವೆ ಎಂದು ಅವರ ಮೇಲೆ ಇಲ್ಲಸಲ್ಲದ ಮಾತುಗಳನ್ನಾಡುತ್ತಾ ಮರ್ಯಾದೆ ತೆಗೆಯುವಂತಹ ಕೆಲಸವನ್ನು ಗೂಂಡಾ ವರ್ತನೆಯ ರೀತಿಯಲ್ಲಿ ನಡೆದುಕೊಳ್ಳುವಂತಹ ಪರಿಸ್ಥಿತಿ ಈಗಾಗಲೇ ತಾಲೂಕಿನಾದ್ಯಂತ ನಡೆದಿದೆ.
ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಸಂಪೂರ್ಣವಾಗಿ ಚರ್ಚೆ ನಡೆಸಿ ಮೈಕ್ರೋ ಫೈನಾನ್ಸ್ ಗಳಲ್ಲಿ ರೂ.1 ಲಕ್ಷಕ್ಕಿಂತ ಕಡಿಮೆ ಸಾಲ ಇರುವ ಫಲಾನುಭವಿಗಳ ಸಾಲ ಮನ್ನಾ ಮಾಡುವ ಕುರಿತು ಕ್ರಮ ಕೈಗೊಳ್ಳಬೇಕು. ಖಾಸಗಿ ಮೈಕ್ರೋ ಫೈನಾನ್ಸ್ಗಳಿಗೆ ಕಡಿವಾಣ ಹಾಕಲು ಚರ್ಚಿಸಬೇಕೆಂದು ಆಗ್ರಹಿಸಿದರು.ಇದೆ ವೇಳೆ ಹನುಮಂತಪ್ಪ ದ್ವಿಗಿಹಳ್ಳಿ, ಮಹೇಶ ಕೊಟ್ಟೂರು, ರಾಜಶೇಖರ ದೂದಿಹಳ್ಳಿ ಮಂಜುನಾಥ ಸಂಬೋಜಿ, ರಾಜೇಶ ಅಂಗಡಿ, ಬಸವರಾಜ ಮೇಗಳಗೇರಿ, ಲಲೀತಾ ಲಮಾಣಿ, ಶೈಲಮ್ಮ ಅರಳಗೇರಿ, ನೀಲಮ್ಮ ಮೇಗಳಗೇರಿ, ಕೊಟ್ರಮ್ಮ ಕಾಯಕದ, ಅಮೀದಾಬಾನಿ ಶೀಡೇನೂರು, ನಾಗಮ್ಮ ತಳವಾರ, ಮಹದೇವಪ್ಪ ಬಣಕಾರ, ಚಂದ್ರಶೇಖರ ಪಾಟೀಲ, ನಿಂಗಪ್ಪ ಸತ್ಯಪ್ಪನವರ, ಪರಸಪ್ಪ ಚಿತ್ತಣ್ಣನವರ ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 