ದೆಹಲಿ ಗೆಲುವು: ಬಿಜೆಪಿ- ಜೆಡಿಎಸ್ ಮುಖಂಡರಿಂದ ವಿಜಯೋತ್ಸವ
ದೇವರಹಿಪ್ಪರಗಿ 09: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಂದ ವಿಜಯೋತ್ಸವ ನಡೆಯಿತು.
ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರದಂದು ಬಿಜೆಪಿ ಹಾಗೂ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರೆ್ಣ ಮಾಡಿ, ಪಟಾಕಿ ಸಿಡಿಸಿ, ಸಿಹಿ ಹಂಚಿ, ಘೋಷಣೆ ಕೂಗಿ ವಿಜಯೋತ್ಸವ ಆಚರಿಸಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಹಾಗೂ ಪ.ಪಂ ಉಪಾಧ್ಯಕ್ಷರಾದ ರಮೇಶ ಮಸಿಬಿನಾಳ ಅವರು ಮಾತನಾಡಿ, ದೆಹಲಿಯಲ್ಲಿ ಬಿಜೆಪಿ 27 ವರ್ಷಗಳ ಬಳಿಕ ಕಮಲ ಅರಳಿದೆ, ವಿಕಸಿತ ಭಾರತದ ಸಂಕಲ್ಪ ತೊಟ್ಟು ದೇಶವನ್ನು ಜಾಗತಿಕ ಮಟ್ಟದಲ್ಲಿ ಬಲಿಷ್ಟಗೊಳಿಸಲು ಯೋಜನೆ ರೂಪಿಸುತ್ತಿರುವ ಪ್ರಧಾನಿಯವರಿಗೆ ದೇಶದ ರಾಜಧಾನಿಯ ಗೆಲುವು ಭೀಮ ಬಲವನ್ನು ತಂದು ಕೊಟ್ಟಿದೆ, ದೆಹಲಿಯಲ್ಲಿ ವಿಜಯ ಸಾಧಿಸಿರುವುದು ನಮ್ಮೆಲ್ಲರಿಗೂ ತುಂಬಾ ಸಂತೋಷವಾಗಿದೆ ಎಂದು ಹೇಳಿದರು.
ಜೆಡಿಎಸ್ ಜಿಲ್ಲಾ ಉಪಾಧ್ಯಕ್ಷರಾದ ರೀಯಾಜ ಯಲಿಗಾರ ಅವರು ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರ ಕೇಂದ್ರದ ಎನ್ ಡಿಎ ಸರ್ಕಾರದಲ್ಲಿ ವಿಕಸಿತ ಭಾರತ ಸಂಕಲ್ಪಕ್ಕೆ ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿದೆ, ದೆಹಲಿಯ ಜನ ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಮೋದಿಯವರ ಸರ್ಕಾರಕ್ಕೆ ಬೆಂಬಲಿಸಿದ್ದಾರೆ. ಭ್ರಷ್ಟಾಚಾರ ಮತ್ತು ದೇಶವನ್ನು ಒಡೆಯುವ ಕೆಲಸ ಹಳೆಯ ಸರ್ಕಾರದಾಗಿತ್ತು. ಅವರಿಗೆ ದೆಹಲಿ ಜನತೆ ತಕ್ಕ ಉತ್ತರ ನೀಡಿದೆ ಎಂದು ಹೇಳಿದರು.ಪ.ಪಂ ಅಧ್ಯಕ್ಷರ ಪ್ರತಿನಿಧಿ ಬಸವರಾಜ ದೇವಣಗಾಂವ, ಪ.ಪಂ ಸದಸ್ಯರಾದ ಕಾಸುಗೌಡ ಬಿರಾದಾರ ಜಲಕತ್ತಿ, ಮುಖಂಡರುಗಳಾದ ಸೋಮಶೇಖರ ಹಿರೇಮಠ, ಮಹಾಂತೇಶ ಬಿರಾದಾರ, ಕಾಶಿನಾಥ ಕಡ್ಲೇವಾಡ, ಸೋಮು ದೇವೂರ, ಭೀಮನಗೌಡ ಲಚ್ಯಾಣ, ರಮೇಶ ಇಳಗೇರ ಸೇರಿದಂತೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.