ಇಂಡಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆಗೆ ಆಗ್ರಹ
ಇಂಡಿ: ಸರ್ಕಾರದಲ್ಲಿ ಹೊಸದಾಗಿ ಜಿಲ್ಲೆಗಳನ್ನು ಮಾಡುವ ಸಂದರ್ಭ ಬಂದಲ್ಲಿ, ಆಡಳಿತದೃಷ್ಟಿಯಿಂದ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಇಂಡಿಯನ್ನು ಕೇಂದ್ರ ಸ್ಥಾನವಾಗಿ ಇಟ್ಟುಕೊಂಡು. ಇಂಡಿ, ಚಡಚಣ, ಆಲಮೇಲ, ಸಿಂದಗಿ, ದೇವರಹಿಪ್ಪರಗಿ ತಾಲೂಕುಗಳನ್ನು ಒಗ್ಗೂಡಿಸಿ ಇಂಡಿಯನ್ನು ಜಿಲ್ಲಾ ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಗುರುವಾರ ಕಂದಾಯ ಸಚಿವರ ಗಮನ ಸೆಳೆದಿದ್ದಾರೆ.
ಈಗಾಗಲೇ ವಿಜಯಪುರ ಜಿಲ್ಲೆಯಲ್ಲಿ 13 ತಾಲೂಕುಗಳಾಗಿದ್ದು ಸಮರ್ಪಕ ಆಡಳಿತ ನಡೆಸಲು ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ, ಹೀಗಾಗಿ ಇಂಡಿಯನ್ನು ಜಿಲ್ಲೆ ಮಾಡಿದರೆ, ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ ಎಂದು ಶಾಸಕ ಪಾಟೀಲ ಸದನದಲ್ಲಿ ಧ್ವನಿ ಎತ್ತಿದ್ದಾರೆ.