ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ತಹಶೀಲ್ದಾರರಿಗೆ ಮನವಿ
Demand for fulfillment of various demands of farmers: Appeal to Tahsildars
ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ: ತಹಶೀಲ್ದಾರರಿಗೆ ಮನವಿ
ಸವದತ್ತಿ 02: ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಬೇಕು ಹಾಗೂ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಆಗ್ರಹಿಸಿ, ಹಸಿರು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಅವರಿಗೆ ಮನವಿ ಸಲ್ಲಿಸಲಾಯಿತು.
ರೈತ ಸಂಘದ ಮುಖಂಡ ಸುರೇಶ ಸಂಪಗಾವಿ, ಮಾತನಾಡಿದ ಅವರು ಪ್ರಸ್ತುತ ಮುಂಗಾರು ಮಳೆ ಆರಂಭವಾಗುತ್ತಿದ್ದು, ಬಿತ್ತನೆ ಕಾರ್ಯಕ್ಕೆ ಸಿದ್ಧತೆ ನಡೆಯುತ್ತಿದೆ. ಆದರೆ, ರೈತರಿಗೆ ಅಗತ್ಯವಿರುವ ರಾಸಾಯನಿಕ ಗೊಬ್ಬರಗಳು ಸಮಯಕ್ಕೆ ಸರಿಯಾಗಿ ಸಿಗುತ್ತಿಲ್ಲ. ಗೊಬ್ಬರದೊಂದಿಗೆ ಇತರೆ ಅನಗತ್ಯ ವಸ್ತುಗಳನ್ನು ಕಡ್ಡಾಯವಾಗಿ ಖರೀದಿಸುವಂತೆ ಒತ್ತಾಯಿಸುತ್ತಿರುವುದರಿಂದ ರೈತರಿಗೆ ಆರ್ಥಿಕ ಹೊರೆಯಾಗುತ್ತಿದೆ. ಅಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ, ಗೊಬ್ಬರ ಸುಲಭವಾಗಿ ಮತ್ತು ಸಮರ್ಕವಾಗಿ ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ಶಿವಾನಂದ ಸರದಾರ ಮಾತನಾಡಿ, ಗೊಬ್ಬರದ ಜೊತೆಗಿನ ಅನಗತ್ಯ ಲಿಂಕ್ ಪದ್ಧತಿಯನ್ನು ತಕ್ಷಣವೇ ಕೈಬಿಟ್ಟು, ನ್ಯಾಯಯುತ ಬೆಲೆಯಲ್ಲಿ ಗೊಬ್ಬರ ಲಭ್ಯವಾಗುವಂತೆ ಮಾಡಬೇಕು. ಸ್ಥಗಿತಗೊಂಡಿರುವ ಸರ್ವೆ ಇಲಾಖೆಯ ಕಾರ್ಯಗಳನ್ನು ಕೂಡಲೇ ಪುನರಾರಂಭಿಸಬೇಕು.ರೈತರ ವಿರೋಧದ ನಡುವೆಯೂ ಕೈಗೊಳ್ಳಲು ಉದ್ದೇಶಿಸಿರುವ ವಿದ್ಯುತ್ ಖಾಸಗೀಕರಣದ ಪ್ರಸ್ತಾವನೆಯನ್ನು ಸರ್ಕಾರ ಕೈಬಿಡಬೇಕು.ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ದುರಸ್ತಿಪಡಿಸಬೇಕು.ಸವದತ್ತಿ ತಾಲೂಕನ್ನು ಸಮಗ್ರವಾಗಿ ನೀರಾವರಿಗೊಳಿಸಲು ಸರ್ಕಾರ ಅಗತ್ಯ ಕ್ರಮ ವಹಿಸಬೇಕು. ಬೇಡಿಕೆಗಳಿಗೆ ಕೂಡಲೇ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಗದೀಶ್ ಅಗಡಿ, ಮಹಾಂತಯ್ಯಾ ಚರಂತಿಮಠ, ಮಂಜುನಾಥ ಕುರಿ, ಚನ್ನಪ್ಪ ಹರ್ಲಾಪೂರ ಸೇರಿದಂತೆ ತಾಲೂಕಿನ ನೂರಾರು ರೈತ ಬಾಂಧವರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 