ನ್ಯಾಯಮೂರ್ತಿ ರೋಹಿಣಿ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಲು ಆಗ್ರಹ
ನ್ಯಾಯಮೂರ್ತಿ ರೋಹಿಣಿ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಲು ಆಗ್ರಹ
ವಿಜಯನಗರ 12: ಜಿಲ್ಲಾ ಹಿಂದುಳಿದ ವರ್ಗಗಳ ಪದಾಧಿಕಾರಿಗಳು ಇಂದು ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ ಅವರ ಮೂಲಕ ಪ್ರಧಾನಿ ಮತ್ತು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವರಿಗೆ ಬೇಡಿಕೆ ಮನವಿ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ವೈ. ಯಮುನೇಶ್ ಮಾತನಾಡಿ ಬಿ.ಪಿ.ಮಂಡಲ ಅಧ್ಯಕ್ಷತೆಯ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಶಿಫಾರಸ್ಸು ಹಾಗೂ ಸುಪ್ರೀಂ ಕೋರ್ಟ್‌ನ ತೀರ್ಿನಂತೆ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಶೇಕಡ 27ಅ ಉದ್ಯೋಗ ಮೀಸಲಾತಿ ಕಾಯ್ದೆ 1992 ರಿಂದ ಜಾರಿಗೆ ಬಂದಿದೆ. ಆದರೆ ದೇಶದಾಧ್ಯಂತ ಎಲ್ಲಾ ಹಿಂದುಳಿದ ಜಾತಿಗಳನ್ನು ಒಂದೇ ಗುಂಪಿನಲ್ಲಿ ಸೇರಿಸಿರುವುದರಿಂದ ಕೆಲವು ಬಲಿಷ್ಠ ಜಾತಿಗಳಿಗೆ ಮಾತ್ರ ಸಿಂಹಪಾಲು ದೊರಕಿದ್ದು, ಅತೀ ಹಿಂದುಳಿದ, ಸಣ್ಣಪುಟ್ಟ ಜಾತಿಗಳಿಗೆ ಉದ್ಯೋಗ ಮೀಸಲಾತಿ ಮರಿಚಿಕೆಯಾಗಿಯೇ ಉಳಿದಿದೆ.
ಈ ಅಸಮಾನತೆಯನ್ನು ನಿವಾರಿಸುವ ನಿಟ್ಟಿನಲ್ಲಿ 2017ರಲ್ಲಿ ಕೇಂದ್ರ ಸರ್ಕಾರವು ನ್ಯಾಯಮೂರ್ತಿ ರೋಹಿಣಿ ಆಯೋಗವನ್ನು ರಚಿಸಿದ್ದು ಈ ಆಯೋಗವು ದೇಶದಾಧ್ಯಂತ ಸಂಚರಿಸಿ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕರ್ನಾಟಕದಲ್ಲಿರುವಂತೆ ಹಿಂದುಳಿದ ಮತ್ತು ಅತೀ ಹಿಂದುಳಿದ ಜಾತಿಗಳೆಂದು ವರ್ಗೀಕರಿಸಿ ವಿವಿಧ ಗುಂಪುಗಳಿಗೆ ಮೀಸಲಾತಿ ಪ್ರಮಾಣ ನಿಗಧಿಪಡಿಸಿ ಆಗಷ್ಟ್ 2023ರಲ್ಲಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದೆ.
ಆಯೋಗವು ವೈಜ್ಞಾನಿಕವಾಗಿ ಜಾತಿಗಳ ವರ್ಗೀಕರಣ ಮಾಡಿದ್ದು, ಈ ಶಿಫಾರಸ್ಸನ್ನು ಜಾರಿಗೊಳಿಸಿದರೆ ನೈಜ ಹಾಗೂ ಸಾಮಾಜಿಕ ಶೈಕ್ಷಣಿಕವಾಗಿ ಅತಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ ಸೌಲಭ್ಯ ದೊರೆತು ಸಂವಿಧಾನದ ಮೂಲ ಉದ್ದೇಶ ಈಡೇರಿದಂತಾಗುತ್ತದೆ. ಆದುದರಿಂದ ಕೇಂದ್ರ ಸರ್ಕಾರವು ವಿಳಂಬ ಮಾಡದೆ ನ್ಯಾಯಮೂರ್ತಿ ರೋಹಿಣಿ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿದರು.
ನಂತರ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷರಾದ ಯು.ಆಂಜನೇಯ್ಯಲು ಮಾತನಾಡಿ ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಶೇಕಡ 27ಅರಷ್ಟು ಮೀಸಲಾತಿ ಕಾನೂನು ಜಾರಿಗೊಳಿಸಿ 3 ದಶಕಗಳಾದರೂ ಈ ವರ್ಗಗಳಿಗೆ ದೊರೆತಿರುವ ಮೀಸಲಾತಿ ಪ್ರಮಾಣ ಶೇಕಡ 15ಅರಷ್ಟು ಮಾತ್ರ ಎಂದು ಕೇಂದ್ರ ಸರ್ಕಾರವೇ ತಿಳಿಸಿದೆ. ಆದುದರಿಂದ ಓಬಿಸಿ ಸಮುದಾಯದಕ್ಕೆ ನಿಗದಿಪಡಿಸಿದ ಉದ್ಯೋಗ ಮೀಸಲಾತಿ ಪ್ರಮಾಣ ದೊರೆಯುವ ನಿಟ್ಟಿನಲ್ಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಓಬಿಸಿ ಅಭ್ಯರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ಅರ್ಜಿ ಶುಲ್ಕ ಹಾಗೂ ಪ್ರವೇಶ ಶುಲ್ಕವನ್ನು ಮನ್ನಾ ಮಾಡುವಂತೆ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಯು. ಆಂಜನೇಯ್ಯಲು, ರವಿಕುಮಾರ್, ಈ ಕುಮಾರಸ್ವಾಮಿ, ಎರಿ್ರಸ್ವಾಮಿ, ಕೆ.ರಾಘವೇಂದ್ರ, ಎಂ.ಶಂಕ್ರ್ಪ, ಎ.ಪಂಪಣ್ಣ, ಪ್ರೋಽಽ ಉಮಾಮಹೇಶ್ವರ್. ಪೊಽಽ ಎಂ.ಕೆ.ಲಕ್ಷ್ಮಣ, ರಾಮಕೃಷ್ಣ, ಗೋಪಿನಾಥ, ಈ.ರಾಘವೇಂದ್ರ, ಹೆಚ್.ತಿಪ್ಪೇಸ್ವಾಮಿ, ಮೊಹಮ್ಮದ್ ಬಾಷ, ನಾಗೇಂದ್ರಚಿತ್ರಗಾರ್, ಯು.ಅಶ್ವತಪ್ಪ, ಮಲ್ಲಿಕಾರ್ಜುನ, ಎಂ.ದಾನೇಶ್, ಕೆ.ವಿ.ರಾಮಲಿ, ಎಂ.ನಾಗಲಿಂಗಪ್ಪ, ಹೆಚ್.ದುರುಗಪ್ಪ, ಇನ್ನು ಮುಂತಾದವರು ಇದ್ದರು.