ದ್ರಾಕ್ಷಿ ಬೆಳೆಗಾರರಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಆಗ್ರಹ
Demand to the government to provide special grants to grape growers
ದ್ರಾಕ್ಷಿ ಬೆಳೆಗಾರರಿಗೆ ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಆಗ್ರಹ
ವಿಜಯಪುರ 12: ಜಿಲ್ಲೆಯಲ್ಲಿ ದ್ರಾಕ್ಷಿ ಬೆಳೆಗಾರರು ನೂರಾರು ಸಮಸ್ಯೆಗಳ ಮಧ್ಯ ಸಾವು ನೋವಿನ ಮಧ್ಯ ಹೋರಾಟ ಮಾಡುತ್ತಾ ಜೀವನ ಸಾಗಿಸುವಂತಾಗಿದೆ. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಕುರಿತು ಆಗ್ರಹ ಮಾಡಿ ಮನವಿ ಸಲ್ಲಿಸಲಾಯಿತು.
ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಮಾತನಾಡುತ್ತಾ ಇಡೀ ಕರ್ನಾಟಕದಲ್ಲಿ ಅಂದಾಜು 1ಲಕ್ಷ ಎಕರೆ ದ್ರಾಕ್ಷಿ ಬೆಳೆಯಲಾಗುತ್ತದೆ. ವಿಜಯಪುರದಲ್ಲಿ ಶೇ.70 ದ್ರಾಕ್ಷಿ ಬೆಳೆಯುತ್ತಿದ್ದು, ಇದನ್ನು ನಂಬಿ 15-20 ಸಾವಿರ ರೈತ ಕುಟುಂಬಗಳು ಹಾಗೂ ಸಾವಿರಾರು ರೈತ ಕಾರ್ಮಿಕರು ಬದುಕು ಸಾಗಿಸುತ್ತಿದ್ದಾರೆ, ಆದರೆ ದಲ್ಲಾಳಿಗಳ ಹಾವಳಿ, ಮಾರುಕಟ್ಟೆಯ ಕೊರತೆ, ಕೋಲ್ಡ್ ಸ್ಟೋರೆಜ್ ಕೊರತೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಖರ್ಚು, ಕೂಲಿಯವರ ಪಗಾರ, ಓಷಧ, ಗೊಬ್ಬರ ಇನ್ನಿತರ ಖರ್ಚು ಹತ್ತು ಪಟ್ಟು ಹೆಚ್ಚಾಗಿದೆ, ಇವುಗಳಿಂದ ಗೆದ್ದು ಬಂದ್ದರೆ, ರೋಗ ಹಾಗೂ ಸರಿಯಾದ ಬೆಲೆ ಸಿಗದೇ ಬೀದಿಗೆ ಬಿದ್ದು ಅನೇಕ ರೈತರು ರೈತ ಆತ್ಮಹತ್ಯೆ ಮಾಡಿಕೊಂಡಿರುವುದು ಇದೆ. ಕಳೆದ ತಿಂಗಳು ಸುರಿದಿರುವ ಅತೀ ಹೆಚ್ಚಿನ ಮಳೆಯಿಂದಾಗಿ ಅನೇಕ ರೈತರ ಜಮೀನಿನಲ್ಲಿ ನೀರು ನಿಂತು ನಷ್ಟ ಅನುಭವಿಸುವಂತಾಗಿದೆ ಇದನ್ನು ಮನಗಂಡು ವಿಮೆ ಹಾಗೂ ಸರಕಾರದಿಂದ ಪರಿಹಾರ ಕೊಡಬೇಕೆಂದು ಆಗ್ರಹಿಸುವುದಾಗಿ ಹೇಳಿದರು.
ದ್ರಾಕ್ಷಿ ಬೆಳೆಗಾರರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿಕೊಂಡರು. 2024-25 ನೇ ಸಾಲಿನ ದ್ರಾಕ್ಷಿ ಬೆಳೆ ವಿಮೆ ಅವದಿ ಮುಗಿದರು ಇನ್ನುವರೆಗೂ ವಿಮೆ ಹಣ ಜಮಾ ಮಾಡಿಲ್ಲ, ಬೇಗ ವಿಮೆ ಹಣ ಜಮಾ ಮಾಡಬೇಕು ದ್ರಾಕ್ಷಿಗೆ ಸಂಬಂಧಿಸಿದ ವಿಮೆ ಕಂಪನಿಯ ಕಚೇರಿಯನ್ನು ವಿಜಯಪುರದಲ್ಲಿ ತೆರೆಯಬೇಕು 2025-26 ನೇ ಸಾಲಿನ ವಾತಾವರಣದಲ್ಲಿ ದ್ರಾಕ್ಷಿ ಬೆಳೆಯಲು ಯೋಗ್ಯ ವಾತಾವರಣ ಇಲ್ಲ, ಕೂಡಲೇ ಜಂಟಿ ಸಮೀಕ್ಷೆ ಕೈಕೊಂಡು ಪ್ರಕೃತಿ ವಿಕೋಪದಿಂದ ಆಗಿರುವ ನಷ್ಟಕ್ಕೆ ಪರಿಹಾರವನ್ನು ನ್ಯಾಯಯುತವಾಗಿ ನೀಡಬೇಕು ದ್ರಾಕ್ಷಿಗೆ ಹವಾಮಾನ ಆದಾರಿತ ವಿಮೆ ನೀಡುವುದಾಗಿ ಹೇಳಿ ಪ್ರಭಾವಿಗಳ ಆದೇಶದಂತೆ ಇದರಲ್ಲಿ ಕೂಡಾ ಅಕ್ರಮ ಕಂಡು ಬರುತ್ತಿದ್ದು, ಇದನ್ನು ಸರಿ ಪಡಿಸಿ ನ್ಯಾಯಯುತವಾಗಿ ನಷ್ಟ ಪರಿಹಾರ ನೀಡಬೇಕು. ಅವಶ್ಯಕತೆಗೆ ಅನುಗುಣವಾಗಿ ಕೋಲ್ಡ್‌ಸ್ಟೋರೆಜ್ ಸ್ಥಾಪನೆ ಮಾಡಬೇಕು, ಸರ್ಕಾರಿ ಕೋಲ್ಡ್‌ಸ್ಟೋರೆಜ್ ಭೂಮಿ ಪೂಜೆಯಾಗಿ ಬಹುದಿನಗಳೆ ಕಳೆದಿವೆ, ಅದು ಪ್ರಾರಂಭವಾಗಬೇಕು. ಜಿಲ್ಲೆಯಲ್ಲಿ ನೆನೆಗುದಿಗೆ ಬಿದ್ದ ವೈನ್ ಪಾರ್ಕ ಕೂಡಲೇ ಪ್ರಾರಂಭವಾಗಬೇಕು ಎ.ಪಿ.ಎಮ್.ಸಿ ಅಡಿಯಲ್ಲಿ ದ್ರಾಕ್ಷಿ (ಮನುಕು) ಖರೀಧಿ ಪುನಃ ಆರಂಭವಾಗಬೇಕು, ಇದರಿಂದ ಮಹಾರಾಷ್ಟ್ರಕ್ಕೆ ಹೋಗುವ ಖರ್ಚು ಉಳಿದು ರೈತರಿಗೆ ಹೆಚ್ಚಿನ ಲಾಭ ಸಿಗಲಿದೆ, ದ್ರಾಕ್ಷಿ ಇಲ್ಲದ ಜಮಿನಿಗೆ ವಿಮೆ ತುಂಬಿ ದ್ರಾಕ್ಷಿ ಎಂದು ರೈತರಿಂದ ಹಣ ಪಡೆದು ಬ್ಯಾನರ ಇಟ್ಟು ಜಿ.ಪಿ.ಎಸ್ ಮಾಡುತ್ತಿದ್ದು, ಇದರಿಂದ ನೈಜ ದ್ರಾಕ್ಷಿ ಬೆಳೆಗಾರರಿಗೆ ಪೆಟ್ಟು ಬಿಳಲಿದೆ, ಇಂತವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ನಕಲಿ ಬೀಜ , ಗೊಬ್ಬರ ಹಾಗೂ ಕೀಟನಾಶಕಗಳ ಹಾವಳಿ ಹೆಚ್ಚಾಗಿದ್ದು ಇದನ್ನು ಕೂಡಲೇ ನಿಲ್ಲಿಸಬೇಕು.
ಈ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದರು.
ಮುಖಂಡರಾದ ಜಕರಾಯ ಪೂಜಾರಿ, ಕನ್ನಪ್ಪ ಕೊಂಡಿ, ಈಶ್ವರ ಯಳಜೇರಿ, ಮಲ್ಲಪ್ಪ ಕೋಮಡಿ, ಕುಮಾರ ಚಡಚಣ, ಸದಾಶಿವ ಘಡಾಲಟ್ಟಿ, ರಾಮಚಂದ್ರ ಅಗಸರ, ಬಸಪ್ಪ ಮಾಳಿ, ಶಿವು ಪಟ್ಟಣಶೆಟ್ಟಿ, ಅಶೋಕ ಶಿರೋಳ, ಭೀಮು ತೋನಶೆಟ್ಟಿ, ಭೀಮು ಬಡಕುರಿ, ಅಮರ ಪೂಜರಿ, ಭೀರು ಗಡದಿ, ಬಾಲಿಸಾಬ ಮುಲ್ಲಾ, ಶೀವು ಮಾಳಿ ಸೇರಿದಂತೆ ಇತರರು ಇದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 