ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಸೇರೆ್ಡಗೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಅಧಿಕಾರಿಗಳಿಗೆ ಸೂಚನೆ
Deputy Commissioner C.N. Sridhar instructs officials to include the names of all eligible voters
ಲೋಕದರ್ಶನ ವರದಿ
ಗದಗ 14: ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಅತ್ಯಂತ ನಿಖರವಾಗಿ ಮತ್ತು ಪಾರದರ್ಶಕವಾಗಿ ಪೂರ್ಣಗೊಳಿಸಬೇಕು. ಯಾವುದೇ ಒಬ್ಬ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಸೇರೆ್ಡಗೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜುಲೈ (13) ರಂದು ಜರುಗಿದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹಾಗೂ ಚುನಾವಣಾ ಅಧಿಕಾರಿಗಳೊಂದಿಗೆ ಹಮ್ಮಿಕೊಳ್ಳಲಾಗಿದ್ದ ಎಸ್.ಐ.ಆರ್. ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ 967 ಮತಗಟ್ಟೆಗಳಲ್ಲಿ ಬಿ.ಎಲ್.ಒ ಗಳು ಕಡ್ಡಾಯವಾಗಿ ಲಭ್ಯವಿದ್ದು, ಮತದಾರರ ಮಾಹಿತಿ ಸಂಗ್ರಹಣೆ ಹಾಗೂ ನಮೂನೆಗಳ ಭರ್ತಿ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯ ಎಲ್ಲಾ 967 ಮತಗಟ್ಟೆಗಳಲ್ಲೂ ಮತದಾರರ ಅನುಕೂಲ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಫಾರ್ಮ್ ಭರ್ತಿ ಮಾಡಲು ತಿಳಿಯದ ಸಾರ್ವಜನಿಕರಿಗೆ ನೆರವಾಗಲು ಸ್ವಸಹಾಯ ಗುಂಪಿನ ಸದಸ್ಯರನ್ನು ಹಾಗೂ ಸ್ವಯಂಸೇವಕರನ್ನು ನಿಯೋಜಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 