ತಾಳಿಕೋಟಿ

ದೇವರ ಹಿಪ್ಪರಗಿ ಶಾಸಕ ರಾಜುಗೌಡಗೆ ಸನ್ಮಾನ

ದೇವರ ಹಿಪ್ಪರಗಿ ಶಾಸಕ ರಾಜುಗೌಡಗೆ ಸನ್ಮಾನ

ತಾಳಿಕೋಟಿ: ದೇವರ ಹಿಪ್ಪರಗಿ ಮತಕ್ಷೇತ್ರದಿಂದ ಪ್ರಥಮ ಬಾರಿಗೆ ಜೆಡಿಎಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾದ ರಾಜುಗೌಡ ಪಾಟೀಲ (ಕು.ಸಾಲವಾಡಗಿ) ಅವರನ್ನು ಜೆಡಿಎಸ್ ನಗರ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಮಂಗಳವಾರ ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಪಕ್ಷದ ವತಿಯಿಂದ ಅವರಿಗೆ ಈ ಸನ್ಮಾನ ನೀಡಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಶಾಸಕ ರಾಜುಗೌಡ ಪಾಟೀಲರು ಮತಕ್ಷೇತ್ರದ ಜನರು ನನ್ನ ಮೇಲೆ ಪ್ರೀತಿ ವಿಶ್ವಾಸವಿರಿಸಿ ಆಯ್ಕೆ ಮಾಡಿದ್ದಾರೆ. ಅವರ ಋಣ ತೀರಿಸುವ ರೀತಿಯಲ್ಲಿ ಕೆಲಸ ಮಾಡುತ್ತೇನೆ.

ಇದರ ಜೊತೆಗೆ ನನ್ನ ಗೆಲುವಿಗಾಗಿ ಹಗಲಿರುಳೆನ್ನದೆ ನಮ್ಮ ಪಕ್ಷದ ಕಾರ್ಯಕರ್ತರು ಮುಖಂಡರು ಶ್ರಮವಹಿಸಿ ಕೆಲಸ ಮಾಡಿದ್ದಾರೆ. ನಿಜವಾಗಿಯೂ ಗೆಲುವಿನ ಶ್ರೇಯಸ್ಸು ಅವರಿಗೇ ಸಲ್ಲಬೇಕಾಗಿದೆ ಎಂದ ಅವರು ಜಿಲ್ಲೆಯಲ್ಲಿ ನಮ್ಮ ಪಕ್ಷಕ್ಕೆ ಉತ್ತಮ ಭವಿಷ್ಯವಿದೆ ಪಕ್ಷ ಸಂಘಟನೆಗಾಗಿ ನಾವೆಲ್ಲರೂ ಕೆಲಸ ಮಾಡಬೇಕಾಗಿದೆ ನಾನು ಸದಾ ನಿಮ್ಮ ಜೊತೆಯಲ್ಲಿದ್ದು ಕೆಲಸ ಮಾಡುತ್ತೇನೆ. ನನಗೆ ನಿಮ್ಮೆಲ್ಲರ ಸಹಕಾರ ಬೇಕು ನನ್ನ ಕ್ಷೇತ್ರ ತಾಳಿಕೋಟಿ ತಾಲೂಕನ್ನು ಒಳಗೊಂಡಿರುವ ಕ್ಷೇತ್ರವಾಗಿದೆ. ಈ ಭಾಗದಲ್ಲಿ ಪಕ್ಷ ಸಂಘಟಿಸಲು ನಾನು ನಿಮ್ಮೊಂದಿಗಿರುವೆ ನಿಮ್ಮ ಈ ಪ್ರೀತಿಯ ಗೌರವಕ್ಕೆ ಋಣಿಯಾಗಿರುವೆ ಎಂದರು.

ಈ ಸಮಯದಲ್ಲಿ ಜೆಡಿಎಸ್ ಜಿಲ್ಲಾ ಕಾರ್ಮಿಕ ಅಧ್ಯಕ್ಷ ಬಿ.ಎಸ್. ಇಸಾಂಪೂರ, ಜೆಡಿಎಸ್ ತಾಲೂಕಾ ಕಾರ್ಯಾಧ್ಯಕ್ಷ ಮಡುಸಾಹುಕಾರ ಬಿರಾದಾರ, ನಗರ ಘಟಕದ ಅಧ್ಯಕ್ಷ ಪ್ರಲ್ಹಾದ ಹಜೇರಿ, ಉಪಾಧ್ಯಕ್ಷ ಶರಣಗೌಡ ಪಾಟೀಲ, ಸಂಗನಗೌಡ ಪಾಟೀಲ, ಬಿ.ಎನ್. ಪಾಟೀಲ (ಕೊಡಗಾನೂರ), ಕಲ್ಲನಗೌಡ ಪಾಟೀಲ, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಡಾ. ಆರೀಫ ಮನಿಯಾರ, ಮತ್ತಿತರರು ಇದ್ದರು 

ಸುದ್ದಿ ಓದಿ