ಬಾಳಿನ ಭಾಗ್ಯೋದಯಕ್ಕೆ ಧರ್ಮ ದಿಕ್ಸೂಚಿ : ಶ್ರೀ ರಂಭಾಪುರಿ ಶ್ರೀಗಳು
ಬಾಳಿನ ಭಾಗ್ಯೋದಯಕ್ಕೆ ಧರ್ಮ ದಿಕ್ಸೂಚಿ
ಬಾಳಿನ ಭಾಗ್ಯೋದಯಕ್ಕೆ ಧರ್ಮ ದಿಕ್ಸೂಚಿ : ಶ್ರೀ ರಂಭಾಪುರಿ ಶ್ರೀಗಳು
ಶಿಗ್ಗಾವಿ 28: ಬಹು ಜನ್ಮಗಳ ಪುಣ್ಯ ಫಲದಿಂದ ಪ್ರಾಪ್ತವಾದ ಈ ಮಾನವ ಜೀವನ ಸಾರ್ಥಕಗೊಳ್ಳಲು ಧರ್ಮಾಚರಣೆ ಅವಶ್ಯಕ. ಉಜ್ವಲ ಬಾಳಿನ ಭಾಗ್ಯೋದಯಕ್ಕೆ ಧರ್ಮ ದಿಕ್ಸೂಚಿಯಾಗಿದೆ ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.
ತಾಲೂಕಿನ ಚಿಕ್ಕಮಣಕಟ್ಟಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ದೇವಸ್ಥಾನ ಮೇಲ್ಭಾಗದಲ್ಲಿ ಶ್ರೀ ನಂದೀಶ್ವರ ಮೂರ್ತಿ ಪ್ರತಿಷ್ಠಾಪನಾ ಅಂಗವಾಗಿ ಜರುಗಿದ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು ಮನುಷ್ಯನ ಬುದ್ದಿ ಶಕ್ತಿಗೆ ತಕ್ಕಂತೆ ಭಾವನೆಗಳು ಬೆಳೆಯುತ್ತಿಲ್ಲ. ಉದಾತ್ತವಾದ ಧರ್ಮದ ಅರ್ಥ ವ್ಯಾಪ್ತಿಯನ್ನು ಅರಿಯದೇ ಜಾತಿಗೆ ಜೋಡಿಸಿ ಧರ್ಮಕ್ಕೆ ಚ್ಯುತಿ ತರುವ ಕೆಲಸವನ್ನು ಕೆಲವರು ಮಾಡುತ್ತಲೇ ಬಂದಿದ್ದಾರೆ. ಸತ್ಯ ಧರ್ಮಕ್ಕೆ ಯಾವಾಗಲೂ ಜಯ ಇದ್ದೇ ಇರುತ್ತದೆ. ಆದರ್ಶ ಗುರಿಯೊಂದಿಗೆ ಸಮರ್ಥ ಗುರುವನ್ನು ಆಶ್ರಯಿಸಿ ಬದುಕು ಕಟ್ಟಿಕೊಳ್ಳಬೇಕು ಎಂದರು.
ಭಾರತ ಸೇವಾ ಸಂಸ್ಥೆ ಬನ್ನೂರ ಇದರ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ 5 ಸಾವಿರ ವರ್ಷಗಳ ಇತಿಹಾಸ ಹೊಂದಿದ ವೀರಶೈವ ಧರ್ಮ ಸಕಲರಿಗೂ ಒಳಿತನ್ನು ಬಯಸುತ್ತ ಬಂದಿದೆ. ಈ ಧರ್ಮದ ತತ್ವಗಳನ್ನು ಅರಿತು ಆಚರಿಸಿ ಬಾಳಿದರೆ ಜೀವನದಲ್ಲಿ ಉನ್ನತಿ ಕಾಣಲು ಸಾಧ್ಯವೆಂದರು.
2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿದ ಜಿ.ಪಂ.ಮಾಜಿ ಸದಸ್ಯ ಬಸನಗೌಡ ಇನಾಮತಿ ಮಾತನಾಡಿ ಲಿಂ. ಶ್ರೀಮದ್ ರಂಭಾಪುರಿ ವೀರಗಂಗಾಧರ ಜಗದ್ಗುರುಗಳು ಮಾನವ ಧರ್ಮಕ್ಕೆ ಜಯವಾಗಲಿ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದು ಸಾರಿ ನಾಡಿನ ಉದ್ದಗಲಕ್ಕೂ ಸಂಚರಿಸಿ ಧರ್ಮ ಜಾಗೃತಿ ಮಾಡದಿದ್ದರೆ ಇಂದು ನಾವು ವೀರಶೈವರಾಗಿ ಉಳಿಯುವುದು ಕಷ್ಟವಾಗುತ್ತಿತ್ತು. ಹಗಲಿರುಳೆನ್ನದೇ ಅವರು ಧರ್ಮ ಪ್ರಚಾರ ಮಾಡಿದ್ದನ್ನು ಮರೆಯುವಂತಿಲ್ಲ ಎಂದರು.
ಮುಕ್ತಿಮಂದಿರ ಕ್ಷೇತ್ರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮಿಗಳು ನೇತೃತ್ವ ವಹಿಸಿದ್ದರು. ಬಂಕಾಪುರ ಅರಳೆಲೆಮಠದ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಸಮ್ಮುಖ ವಹಿಸಿದ್ದರು. ದುಗ್ಲಿ-ಕಡೇನಂದಿಹಳ್ಳಿ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿಗಳು ಉಪದೇಶಾಮೃತ ನೀಡಿದರು. ಗಂಜಿಗಟ್ಟಿ ಡಾ.ವೈಜನಾಥ ಶಿವಲಿಂಗ ಶಿವಾಚಾರ್ಯರು, ಹಿರೆಮಣಕಟ್ಟಿ ವಿಶ್ವಾರಾಧ್ಯ ಶಿವಾಚಾರ್ಯರು ಉಪಸ್ಥಿತರಿದ್ದರು.
ತಿಪ್ಪಣ್ಣ ಸಾತಣ್ಣನವರ, ನಾಗೇಶ ಶರ್ಮಾ, ಶಿವಾನಂದ ಮ್ಯಾಗೇರಿ, ಟಿ.ವಿ.ಸುರಗಿಮಠ, ಹಿರೇಮಣಕಟ್ಟಿ ಮತ್ತು ಕಬನೂರು ಗ್ರಾಮ ಪಂಚಾಯತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಶ್ರೀ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸಾಧಕರಿಂದ ವೇದಘೋಷ, ಶ್ರೀ ಕಲ್ಮೇಶ್ವರ ಕಲಾ ತಂಡ ಮುಗಳಿ ಇವರಿಂದ ಭಕ್ತಿಗೀತೆ ಜರುಗಿತು. ಸವಣೂರಿನ ಡಾ.ಗುರುಪಾದಯ್ಯ ಸಾಲಿಮಠ ಸರ್ವರನ್ನು ಸ್ವಾಗತಿಸಿ ನಿರೂಪಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 