ಧೋನಿಗೆ ಮೊನಕಾಲು ಗಾಯ: ಶಸ್ತ್ರಚಿಕಿತ್ಸೆ ಸಾಧ್ಯತೆ?
ಮುಂಬೈ 31: ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮುಂಬೈನ ಕೋಲ್ಕಿಲಾಬೆನ್ ಆಸ್ಪತ್ರೆಯಲ್ಲಿ ಮೊಣಕಾಲಿನ ತಪಾಸಣೆ ಮಾಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇದೀಗ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದ ಧೋನಿ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಂಡಿದ್ದಾರೆ. ಒಂದು ವೇಳೆ ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ, ದಾಖಲಾಗುವ ಸಾಧ್ಯತೆಗಳಿವೆ ಆದರೆ, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ.
ಐಪಿಎಲ್ ನ ಮೊದಲ ಪಂದ್ಯದಲ್ಲಿಯೇ ಧೋನಿ ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು.
ಚೆನ್ನೈ ಕೋಚ್ ಸ್ಟೀಫನ್ ಫ್ಲೆಮಿಂಗ್ ಕೂಡ ಧೋನಿಯ ಗಾಯದ ಬಗ್ಗೆ ಹೇಳಿಕೆಯನ್ನು ನೀಡಿದ್ದರು. ಅವರಿಗೆ ಗಾಯವು ತುಂಬಾ ಗಂಭೀರವಾಗಿಲ್ಲ. ಶೀಘ್ರವೇ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.