ದೇವಿ ವಿಸರ್ಜನೆಯೊಂದಿಗೆ ದ್ಯಾಮವ್ವಾ ಜಾತ್ರೆ ವೈಭವಯುತ ಅಂತ್ಯ
Dhyamava fair concludes with the immersion of the goddess
ಮುಂಡಗೋಡ 12: ಪಟ್ಟಣದ ಹಳೂರ ಶ್ರೀ ಮಾರಿಕಾಂಬಾ (ದ್ಯಾಮವ್ವಾ) ದೇವಿಯ ಜಾತ್ರೆ ಬುಧವಾರ ದೇವಿ ವಿಸರ್ಜನೆಯೊಂದಿಗೆ ಭಕ್ತಿಭಾವಪೂರ್ಣವಾಗಿ ಸಮಾರೋಪಗೊಂಡಿತು. ಕಳೆದ ಎಂಟು ದಿನಗಳಿಂದ ಚೌತಮನೆಯಲ್ಲಿ ಪ್ರತಿಷ್ಠಾಪನೆಯಾಗಿದ್ದ ದೇವಿಯ ದರ್ಶನಕ್ಕೆ ಭಕ್ತರು ಅಪಾರ ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ,ಪುನಸ್ಕಾರಗಳಲ್ಲಿ ಪಾಲ್ಗೊಂಡರು. ಜಾತ್ರಾ ಅವಧಿಯಲ್ಲಿ ಪ್ರತಿದಿನವೂ ಹೋಮ, ಹವನ, ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆಯಂತಹ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸಂಜೆ ವೇಳೆಗೆ ಭಜನೆ, ಆರತಿ ಮತ್ತು ಮಂಗಳ ವಾದ್ಯಗಳ ನಡುವೆ ದೇವಿಗೆ ಪೂರ್ಣಾಹುತಿ ಸಲ್ಲಿಸಿ, ಸಂಪ್ರದಾಯಬದ್ಧ ವಿಧಿವಿಧಾನಗಳೊಂದಿಗೆ ವಿಸರ್ಜನೆ ನೆರವೇರಿಸಲಾಯಿತು. ಈ ಸಂದರ್ಭ ಭಕ್ತರು ಭಾವುಕರಾಗಿ ದೇವಿಗೆ ವಿದಾಯ ಹೇಳಿದರು. ಮಾ.19ರಂದು ಯುಗಾದಿ ದಿನ ಮರು ಪ್ರತಿಷ್ಠಾಪನೆ: ಯುಗಾದಿ ಹಬ್ಬದ ಅಂಗವಾಗಿ ಮಾರ್ಚ್ 19ರಂದು ಗುರುವಾರ ದೇವಸ್ಥಾನದಲ್ಲಿ ಹೋಮ,ಹವನಾದಿಗಳೊಂದಿಗೆ ಶ್ರೀ ಮಾರಿಕಾಂಬಾ (ದ್ಯಾಮವ್ವಾ) ದೇವಿಯ ಮರು ಪ್ರತಿಷ್ಠಾಪನೆ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವಿಯ ಆಶೀರ್ವಾದ ಪಡೆಯುವಂತೆ ದೇವಸ್ಥಾನ ಸಮಿತಿ ಮನವಿ ಮಾಡಿದೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 