ಬಸವರಾಜ ಬೊಮ್ಮಾಯಿರವರ ಜನ್ಮದಿನೋತ್ಸವದ ಅಂಗವಾಗಿ ಮಕ್ಕಳಿಗೆ ಬಟ್ಟೆ, ಪುಸ್ತಕ ವಿತರಣೆ
Distribution of clothes and books to children as part of Basavaraja Bommai's birthday celebrations
ಹಾವೇರಿ 28: ಇಜಾರಿಲಕ ಮಾಪುರದಲ್ಲಿರುವ ಜ್ಯೋತಿ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆಯಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ - ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರ 66 ನೇಯ ಜನ್ಮದಿನೋತ್ಸವದ ಅಂಗವಾಗಿ ಮಕ್ಕಳಿಗೆ ಬಟ್ಟೆ, ಪುಸ್ತಕಗಳನ್ನು ವಿತರಿಸುವ ಮೂಲಕ ಸಿಹಿ ಹಚ್ಚಿ ಜನ್ಮದಿನವನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ ಮ.ನಿ.ಪ್ರ ಸದಾಶಿವ ಮಹಾಸ್ವಾಮಿಗಳು ಹುಕ್ಕೇರಿಮಠ, ಹಾವೇರಿ ಶ್ರೀಗಳು ಸಾನಿಧ್ಯ ವಹಿಸಿದ್ದರು. ಹಾಗೂ ಭಾರತೀಯ ಜನತಾ ಪಕ್ಷದ ಜಿಲ್ಲಾಧ್ಯಕ್ಷರಾದ ವೀರುಪಾಕ್ಷಪ್ಪ ಬಳ್ಳಾರಿ, ಯುವ ಮುಖಂಡರಾದ ಭರತ ಬೊಮ್ಮಾಯಿ, ಮುಖಂಡರುಗಳಾದ ಬಸವರಾಜ ಅರಬಗೊಂಡ, ಸಂಘಟಕರಾದ ನವೀನ ಸವಣೂರ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 