ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ವಸ್ತು ವಿತರಣೆ
Distribution of exam materials to SSLC students
ತಾಳಿಕೋಟಿ: ತಾಲೂಕಿನ ಬ.ಸಾಲವಾಡಗಿ ಸರ್ಕಾರಿ ಪ್ರೌಢಶಾಲೆ ಶಾಲೆಯ ಹಳೆಯ ವಿದ್ಯಾರ್ಥಿಗಳು ತಾವು ಕಲಿತಿರುವ ಶಾಲೆಗೆ ಬಂದು 10ನೇ ತರಗತಿವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ಸಮೀಪ ಬಂದ ಕಾರಣ ಪ್ರತಿಯೊಬ್ಬ ವಿದ್ಯಾರ್ಥಿ ್ಘ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯುವ ಪ್ಯಾಡ್ ್ಘ 1 ಪೆನ್ನನ್ನು ವಿತರಣೆ ಮಾಡಿದರು .ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯನಿ ಸುಮಂಗಲಾ ಕೋಳೂರು ಅವರು ಎಸ್ ಎಸ್ ಎಲ್ ಸಿ ಪರೀಕ್ಷಾ ಸಿದ್ಧತೆಗಳ ಕುರಿತು ವಿದ್ಯಾರ್ಥಿಗಳಿಗೆ ಸಮಗ್ರ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ಸಾಹೇಬಗೌಡ ಅನಂತ ರೆಡ್ಡಿ, ಸದಸ್ಯ ಭೀಮನಗೌಡ ಅನಂತರೆಡ್ಡಿ ಹಾಗೂ ಎಲ್ಲ ಗುರುಬಳಗ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಹಳೆ ವಿದ್ಯಾರ್ಥಿಗಳ ಬಳಗದಿಂದ ಬ.ಸಾಲವಾಡಗಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ಮಕ್ಕಳು ಉತ್ತಮ ರೀತಿಯಲ್ಲಿ ಅಂಕವನ್ನು ಪಡೆಯಲಿ ಎಂದು ಶುಭವನ್ನು ಹಾರೈಸಿ, ನಾಡು ನುಡಿಯ ಕುರಿತು ಕಾಳಜಿಯನ್ನು ವ್ಯಕ್ತಪಡಿಸಿದರು. ಪೆನ್ ಮತ್ತು ಪ್ಯಾಡ್ ನೀಡಿ ಶುಭ ಹಾರೈಸಿರುವ ರುವ ಎಲ್ಲ ಹಳೆಯ ವಿದ್ಯಾರ್ಥಿಗಳಿಗೆ ಶಾಲೆಯ ಪರವಾಗಿ ಎಸ್ ಡಿ ಎಂ ಸಿ ಅಧ್ಯಕ್ಷರು ಧನ್ಯವಾದಗಳನ್ನು ತಿಳಿಸಿದರು. ಈ ಸಮಯದಲ್ಲಿ ತಿಮ್ಮಾರೆಡ್ಡಿ, ಆಕಾಶ ಗೋಡೆಕರ್, ಸಂಗಮೇಶ ಮಾಶಾಳ, ಸಂತೋಷ ಹೊಳೆಪ್ಪಗೋಳ, ಹಣಮಂತ್ರಾಯ ಹೂಗಾರ, ವಿಕಾಸ್ ಕೋಳೂರ, ಕುಪೇಂದ್ರ, ಫೈಸಲ್ ನಂದೀಶ ವಾಲಿಕಾರ ಮತ್ತಿತರರು ಇದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 