ಸರ್ಕಾರಿ ಶಾಲೆಗಳಿಗೆ ಫುಟ್ಬಾಲ್ ವಿತರಣೆ
ಲೋಕದರ್ಶನ ವರದಿ
ಹೂವಿನ ಹಡಗಲಿ 12: ಕ್ರೀಡೆಗಳಿಗೆ ಪ್ರೋತ್ಸಾಹಿಸುವ ಕೆಲಸ ನಿರಂತರವಾಗಿ ಆಗಬೇಕು ಎಂದು ತಾಲೂಕು ದೈಹಿಕ ಪರೀವೀಕ್ಷಕ ರಫಿ ಅಹಮದ್ ಖವಾಸ್ ಹೇಳಿದರು.ಪಟ್ಟಣದ ಸೊಪ್ಪಿನ ವೀರಮ್ಮ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಣ ಸಚಿವಾಲಯ ಭಾರತ ಸರ್ಕಾರ ಫುಟ್ಬಾಲ್ ಫಾರ್ ಸ್ಕೂಲ್ ಪ್ರೋಗ್ರಾಮ್ ಎಫ್ ಬಿಮುತ್ತು ಎಸ್ ಪಿ ಯೋಜನೆ ಅಡಿಯಲ್ಲಿ ಪಟ್ಟಣದ ಕ್ಲಸ್ಟರ್ ವ್ಯಾಪ್ತಿಯ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಮಾಸಿಕ ಮುಖ್ಯ ಶಿಕ್ಷಕರ ಸಭೆಯಲ್ಲಿ ಫುಟ್ಬಾಲ್ ವಿತರಿಸಿ ಮಾತನಾಡಿದರು. ಶಿಕ್ಷಕರ ಸಂಘದ ಅಧ್ಯಕ್ಷ ವಿಬಿ ಜಗದೀಶ್ ಶಿಕ್ಷಕರ ಸಂಘದ ಶಾಲಾ ಕಾರ್ಯದರ್ಶಿವಿ ಯೇಸುಪಟ್ಟಣ ಶಿಕ್ಷಣ ಸಂಯೋಜಕ ವೀರೇಶ್ ಬಗಲಿ ಸೇರಿದಂತೆ ಪಟ್ಟಣ ವ್ಯಾಪ್ತಿಯ ಪ್ರಾಥಮಿಕ ಶಾಲಾ ಮುಖ್ಯ ಗುರುಗಳುಹಾಜರಿದ್ದರು.