ವಿಕಲಚೇತನ ಪಲಾನುಭವಿಗಳಿಗೆ ಇಂಧನ ಜಾಲಿತ ತ್ರಿಕಚ್ರ ವಾಹನ ವಿತರಣೆ
Distribution of fuel-powered three-wheelers to differently-abled beneficiaries
ಲೋಕದರ್ಶನ ವರದಿ
ಸಿಂದಗಿ 02: ಸಮಾಜದಲ್ಲಿ ವಿಕಲಚೇತನರು ಸ್ವಾವಲಂಬಿಗಳಾಗಿ ಬದುಕಬೇಕಲು ಹಾಗೂ ಮುಕ್ತವಾಗಿ ಸಂಚರಿಸಲು ಅವರಿಗೆ ತ್ರಿಚಕ್ರ ವಾಹನ ನೀಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಸಿಂದಗಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತನ್ 2025-26ನೆಯ ಸಾಲಿನ ತಾಪಂ ಅನಿರ್ಬಂಧಿತ ಅನುದಾನದಡಿಯಲ್ಲಿ ಅರ್ಹ ಆಲಮೇಲ 6 ವಿಕಲಚೇತನ ಪಲಾನುಭವಿಗಳಿಗೆ ಇಂಧನ ಜಾಲಿತ ತ್ರಿಕಚ್ರ ವಾಹನವನ್ನು ವಿತರಿಸಿ ಮಾತನಾಡಿದ ಅವರು, ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಸರಕಾರದಿಂದ ಸಿಗಬೇಕಾದ ಸೌಕರ್ಯಗಳನ್ನು ಅತ್ಯಂತ ಪ್ರಮಾಣಿಕವಾಗಿ ಅರ್ಹರಿಗೆ ತಲುಪುವಂತಾಗಬೇಕು. ಸಮಾಜದಲ್ಲಿ ವಿಕಲಚೇತನರು ಸ್ವಾವಲಂಬಿಗಳಾಗಿ ಬದುಕಬೇಕು. ಇದರ ಸದುಪಯೋಗವನ್ನು ಎಲ್ಲರೂ ಪಡೆಯಬೇಕು ಎಂದರು.
ತಾಪಂ ಇಒ ರಾಮು ಅಗ್ನಿ, ಅಕ್ಷರ ದಾಸೋಹ ಅಧಿಕಾರಿ ಅರವಿಂದ ಡೋಣೂರ, ಜೋಗುರ ಮೋಟಾರ್ಸ ಮಾಲೀಕರಾದ ರಮೇಶ ಜೋಗುರ, ಉಮೇಶ ಜೋಗುರ, ಜಿಲ್ಲಾ ಕೆಡಿಪಿ ಸದಸ್ಯ ನೂರಹ್ಮದ ಅತ್ತಾರ, ಗ್ಯಾರಂಟಿ ಸಮಿತಿ ಆಲಮೇಲ ಅಧ್ಯಕ್ಷ ಅಶೋಕ ಕೋಳಾರಿ, ಸಿಂದಗಿ ಅಧ್ಯಕ್ಷ ಸಂತೋಷ ಸಾಲಿ, ಸದಸ್ಯೆ ಸುನಂದಾ ಯಂಪುರೆ, ಮಹಾನಂದ ಬಮ್ಮಣ್ಣಿ, ಮುತ್ತು ಸಾತಿಹಾಳ, ಶಾಂತು ರಾಣಾಗೋಳ, ಮೋಶಿನ್ ಬೀಳಗಿ, ಶಿವಾನಂದ ಹಡಪದ, ಐಇಸಿ ನರೇಗಾ ಸಂಯೋಜಕ ಭೀಮರಾಯ ಚೌಧರಿ, ರಮೇಶ ನಡುವಿನಕೇರಿ, ಪ್ರಕಾಶ ಹೊಸಮನಿ ಸೇರಿದಂತೆ ಫಲಾನುಭವಿಗಳು, ಇಲಾಖೆ ಸಿಬ್ಬಂದಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಇತರರು ಇದ್ದರು.
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ
ಟ್ರಂಪ್ ನೌಕಾ ದಿಗ್ಬಂಧನ ಕ್ರಮ ಘೋಷಣೆ; ಇರಾನ್ ಮೇಲೆ ಅಮೆರಿಕದ ಮೂರನೇ ರಾತ್ರಿ ದಾಳಿ
ಹೆಚ್ಚಿನ ಬಡ್ಡಿ ಆಮಿಷ, 25.79 ಕೋಟಿ ವಂಚನೆ: ಮುಖ್ಯ ಆರೋಪಿ ಬಂಧನ: ನೊಂದವರು ಮಾಳಮಾರುತಿ ಠಾಣೆಗೆ ಸಂಪರ್ಕಿಸಿ
ಶ್ರೀಮುರಳಿ ಅಭಿನಯದ ‘ಪರಾಕ್’ ಟೀಸರ್ ಬಿಡುಗಡೆ; ಭರ್ಜರಿ ಆ್ಯಕ್ಷನ್ ಮತ್ತು ತೀವ್ರ ಕಥಾಹಂದರದ ಸುಳಿವು 