ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ
Distribution of three-wheelers to the disabled
ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ
ಹಾವೇರಿ 14: ನಗರದ ಪ್ರವಾಸಿ ಮಂದಿರದ ಆವರಣದಲ್ಲಿ ವಿಧಾನ ಪರಿಷತ್ ಶಾಸಕರ 2024-2025 ಸಾಲಿನ ಪ್ರದೇಶಾಅಭಿವೃದ್ಧಿ ಯೋಜನೆ ಅಡಿ ವಿಕಲಚೇತನರಿಗೆ ತ್ರಿಚಕ್ರ ವಾಹನವನ್ನು ವಿಧಾನ ಪರಿಷತ್ ಸದಸ್ಯರಾದ ಎಸ್.ವಿ.ಸಂಕನೂರ ಅವರು ವಿಕಲಚೇತನ ಅಭ್ಯರ್ಥಿಗಳಿಗೆ ಹಸ್ತಾಂತರಿಸಿದರು.
ಕಾನೂನಾತ್ಮಕವಾಗಿ ಡ್ರೈವಿಂಗ್ ಲೈಸೆನ್ಸ್, ಹೆಲ್ಮೆಟ್, ಇನ್ಸೂರೆನ್ಸ್ ,ಹೊಗೆರಹಿತ ಪ್ರಮಾಣ ಪತ್ರ, ವಾಹನದಲ್ಲಿ ಇಟ್ಟುಕೊಂಡು ಮುಂಜಾಗ್ರತಾ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ವಾಹನ ಚಾಲನೆ ಮಾಡಬೇಕು. ತಮಗೆ ವಿತರಣೆ ಮಾಡಿದ ವಾಹನವನ್ನು ಬೇರೆ ವ್ಯಕ್ತಿಗಳಿಗೆ ಕೊಡಬಾರದು. ಸರ್ಕಾರದ ಯೋಜನೆಯ ಸದುಪಯೋಗ ಪಡೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಕಲ್ಯಾಣ ಕಾಂಬ್ಳೆ,ತಹಶೀಲ್ದಾರ ಕೆ .ಶರಣಮ್ಮ,ವಿಕಲಚೇತನರ ಕಲ್ಯಾಣಾಧಿಕಾರಿ ಆಶು ನದಾಫ್,ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ,ಶಿವರಾಜ ಸಜ್ಜನರ,ನಗರಸಭೆ ಸದಸ್ಯರಾದ ಚನ್ನಮ್ಮ ಬ್ಯಾಡಗಿ,ಮುಖಂಡರಾದ ಪರಮೇಶಪ್ಪ ಮೇಗಳಮನಿ,ಗವಿಸಿದ್ದಪ್ಪ ದ್ಯಾಮಣ್ಣನವರ,ವೀರೇಶ ಅಂಗಡಿ,ಹನಮಂತಪ್ಪ ದಾಸರ,ಮೃತ್ಯುಂಜಯ ಮುಷ್ಠಿ ಸೇರಿದಂತೆ ಅನೇಕರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 