ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಸಂದೇಶ ಸಾರುವ ಪ್ರಚಾರ ವಾಹನಕ್ಕೆ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಚಾಲನೆ
District Collector C.N.Sreedhar drives the campaign vehicle to spread the message about eradication
ಗದಗ 14 : 2025-26 ನೇ ಸಾಲಿನ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಗದಗ ಜಿಲ್ಲೆಯಾದ್ಯಂತ ಬಾಲ ಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಸಂದೇಶ ಸಾರುವ ಅಟೋ ಪ್ರಚಾರಕ್ಕೆ ಸೋಮವಾರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಬಾಲಕಾರ್ಮಿಕ ಕಿಶೋರ ಕಾರ್ಮಿಕ ಪದ್ಧತಿ ವಿರೋಧಿ ಸಂದೇಶ ಸಾರುವ ಕರಪತ್ರ ಪೋಸ್ಟರ್ಸ್ ಹಾಗೂ ಸ್ಟಿಕರ್ಸ್‌ಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ವಸಂತ ಮಡ್ಲೂರ, ಗದಗ ಕಾರ್ಮಿಕ ನೀರೀಕ್ಷಕರಾದ ಕು.ಸುಷ್ಮಾ, ಬಾಲ ಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸಂದೇಶ ಪಾಟೀಲ ಸೇರಿದಂತೆ ಕಾರ್ಮಿಕ ಇಲಾಖೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 