ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ
District In-charge Minister's District Tour Program
ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ ಕಾರ್ಯಕ್ರಮ
ಗದಗ 14: ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರು ಡಿಸೆಂಬರ್ 15 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ವಿವರ ಈ ಕೆಳಗಿನಂತಿದೆ.ಡಿಸೆಂಬರ್ 15 ರಂದು ಬೆ 11.05 ಗಂಟೆಗೆ ಹುಬ್ಬಳ್ಳಿಯಿಂದ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಹೆಲಿಕಾಪ್ಟರ್ ಮೂಲಕ ಹೊರಟು ಗದಗ ತಾಲೂಕು ಹರ್ಲಾಪುರ ಗ್ರಾಮದಲ್ಲಿ ಕಮಲಾಬಾಯಿ ನಾರಾಯಣರಾವ್ ಕುಲಕರ್ಣಿ ಸರ್ಕಾರಿ ಪ್ರೌಢಶಾಲೆ ಆವರಣದ ಹೆಲಿಪ್ಯಾಡ್‌ಗೆ ಆಗಮಿಸುವರು.ನಂತರ ಬೆ 11.30 ಗಂಟೆಗೆ ಹರ್ಲಾಪುರ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ದೇವಸ್ಥಾನ ಸೇವಾ ಸಮಿತಿ ಯಿಂದ ಆಯೋಜಿಸಲಾದ ಬೀರಲಿಂಗೇಶ್ವರ ಹಾಗೂ ಮಾಳಿಂಗರಾಯ ಮೂರ್ತಿ ಪ್ರತಿಷ್ಟಾಪನೆ ಹಾಗೂ ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ನಂತರ ಮಧ್ಯಾಹ್ನ 12 ಗಂಟೆಗೆ ಹರ್ಲಾಪುರ ಗ್ರಾಮದ ಶ್ರೀಮತಿ ಕಮಲಾಬಾಯಿ ನಾರಾಯಣರಾವ್ ಕುಲಕರ್ಣಿ ಸರ್ಕಾರಿ ಪ್ರೌಢಶಾಲೆ ಆವರಣದ ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ನಿರ್ಗಮಿಸಿ ರೋಣ ಪಟ್ಟಣದ ದಿ. ಪೌಲ್ ಅಕಾಡೆಮಿ ಸ್ಕೂಲ್ ಆವರಣದಲ್ಲಿನ ಹೆಲಿಪ್ಯಾಡ್ ತಲುಪುವುದು.ಮಧ್ಯಾಹ್ನ 12.15 ಗಂಟೆಗೆ ರೋಣದ ಡ್ರೋಣಾಚಾರ್ಯ ತಾಲೂಕು ಕ್ರೀಡಾಂಗಣದಲ್ಲಿ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ದಿಂದ ಆಯೋಜಿಸಿರುವ ರೋಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.ನಂತರ ಸಂಜೆ 4 ಗಂಟೆಗೆ ರೋಣದಿಂದ ಹೆಲಿಕಾಪ್ಟರ್ ಮೂಲಕ ನಿರ್ಗಮಿಸಿ ಸಂಜೆ 5 ಗಂಟೆಗೆ ಬೆಳಗಾವಿಯ ಸುವರ್ಣ ಸೌಧದ ಹೆಲಿಪ್ಯಾಡ್ ಗೆ ಪ್ರಯಾಣಿಸುವರು ಎಂದು ಸಚಿವರ ಕಾರ್ಯಾಲಯ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 