ಜಮಖಂಡಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಭೇಟಿ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ  ಶಿವಯೋಗಿ ಕಳಸದ ಭೇಟಿ
ಜಮಖಂಡಿ ಮಿನಿ ವಿಧಾನಸೌಧದಲ್ಲಿ ಕಂದಾಯ ಇಲಾಖೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ ಭೇಟಿ ನೀಡಿ, ಸಭೆಯನ್ನ

ಲೋಕದರ್ಶನ ವರದಿ,

ಜಮಖಂಡಿ 28:ಕೃಷಿ ಇಲಾಖೆ ಸರ್ಕಾರದ ಕಾರ್ಯದರ್ಶಿಗಳು ಹಾಗೂ  ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ   ಶಿವಯೋಗಿ ಕಳಸದ ಅವರು  ಮತದಾರರ ನೋಂದಣಾಧಿಕಾರಿಗಳು ಹಾಗೂ ಜಮಖಂಡಿ ಉಪವಿಭಾಗದ ಸಹಾಯಕ ಮತದಾರರ ನೋಂದಣಾಧಿಕಾರಿಗಳೊಂದಿಗೆ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2023 ಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿ ಪ್ರಕಟಿಸಿದ ನಂತರ ಹಕ್ಕು ಮತ್ತು ಆಕ್ಷೇಪಣಾ ಅಂತಿಮ ಅವಧಿ ಡಿ.8 ರವರೆಗೆ ಸ್ವೀಕೃತಗೊಂಡು ನಮೂನೆ 6,7,8 ಗಳ ವಿಲೇವಾರಿಗಳಲ್ಲಿ ನಿಯಮ ಪಾಲಿಸಿದ ಬಗ್ಗೆ ಹಾಗೂ ದಾಖಲೆಗಳನ್ನು ಪರಿಶೀಲಿಸಲು ಭಾರತ ಚುನಾವಣೆ ಆಯೋಗದ ನಿರ್ದೇಶನದಂತೆ  ಸಭೆ ನಡೆಸಿದರು.

ನಗರದ ಮಿನಿ ವಿಧಾನಸೌಧ ಸಭಾ ಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಜಮಖಂಡಿ ಉಪವಿಭಾಗದ ಮುಧೋಳ, ತೇರದಾಳ, ಜಮಖಂಡಿ ಹಾಗೂ ಬೀಳಗಿ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಕೆಲವು ಹಕ್ಕು ಆಕ್ಷೇಪಣೆ ಅರ್ಜಿಗಳ ಬಗ್ಗೆ ಮತದಾರರ ನೋಂದಣಾಧಿಕಾರಿಗಳು ಕೈಗೊಂಡ ಕ್ರಮಗಳ ಬಗ್ಗೆ ಹಾಗೂ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಕೆಲವು ನ್ಯೂನ್ಯತೆಗಳನ್ನು ಸರಿಪಡಿಸುವಂತೆ ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳಿಗೆ ಕೆಲವು ಸಲಹೆ-ಸೂಚನೆಗಳನ್ನು ನೀಡಿದರು.

ಈ ಬಗ್ಗೆ ಅನುಪಾಲನಾ ವರದಿಯನ್ನು ಸಲ್ಲಿಸಲು ನಿದರ್ೇಶನ ಜಮಖಂಡಿ ಉಪವಿಭಾಗದಲ್ಲಿ ಇಂದಿನವರೆಗೆ ಒಟ್ಟು 8,48,040 ಮತದಾರರಿದ್ದು, ಅದರಲ್ಲಿ 4,21,899 ಮರುಷ ಮತ್ತು 1,2,115 ಮಹಿಳಾ ಹಾಗೂ 3 ತೃತೀಯ ಲಿಂಗಿ ಮತದಾರರು ಇದ್ದು, ಸೀಕೃತಗೊಂಡಿರುವ ಹಕ್ಕು ಮತ್ತು ಆಕ್ಷೇಪಣೆಗಳನ್ನು ನಿಗದಿತ ಅವಧಿಯೊಳಗಾಗಿ ವಿಲೇವಾರಿ ಮಾಡಬೇಕು. ಇದೇ ರೀತಿ ನಮೂನೆ 67 ಗಳನ್ನು ನಿಗಧಿತ ಅವಧಿಯಲ್ಲಿ ದಾಖಲೆಗಳನ್ನು ಪರಿಶೀಲಿಸಿ ನಿಯಮಾನುಸಾರ ವಿಲೇವಾರಿ ಮಾಡುವಂತೆ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಬೇಕು. ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ದೋಷಮುಕ್ತ ಮತದಾರರ ಪಟ್ಟಿ ತಯಾರಿಸುವಲ್ಲಿ ಅಗತ್ಯ ಕ್ರಮವಹಿಸಲು ಸಭೆಯಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ಉಪ ವಿಭಾಗಾಧಿಕಾರಿ ಡಾ.ಸಿದ್ದು ಹುಲ್ಲೋಳ್ಳಿ, ತಹಸೀಲ್ದಾರ ಸದಾಶಿವ ಮಕ್ಕೋಜಿ ಸೇರಿದಂತೆ ಅನೇಕರಿದ್ದರು. 



ಸುದ್ದಿ ಓದಿ