ಜಿಲ್ಲಾ ಮಟ್ಟದ ರಸಪ್ರಶ್ನೆ : ಗೌಶಿಯಾ ಠಾಕೂರ ರಾಜ್ಯ ಮಟ್ಟಕ್ಕೆ ಆಯ್ಕೆ
ಜಿಲ್ಲಾ ಮಟ್ಟದ ರಸಪ್ರಶ್ನೆ : ಗೌಶಿಯಾ ಠಾಕೂರ ರಾಜ್ಯ ಮಟ್ಟಕ್ಕೆ ಆಯ್ಕೆ
ರಾಣೇಬೆನ್ನೂರು 26: ಇಲ್ಲಿನ ವೀರಭದ್ರೇಶ್ವರ ನಗರದ ಪ್ರತಿಷ್ಠಿತ ನ್ಯೂ ಪಬ್ಲಿಕ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ, ಕು.ಗೌಶಿಯಾ ಇಸ್ಮಾಯಿಲ್ ಠಾಕೂರ, ರಾಜ್ಯಮಟ್ಟದಲ್ಲಿ ನಡೆಯುವ ರಸಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಹಾವೇರಿ ಜಿಲ್ಲಾ ಗುರುಭವನದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, 2024-ಜಿಲ್ಲಾ ಮಟ್ಟದ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆ ಆಯೋಜಿಸಿತ್ತು. ಸ್ಪರ್ಧಾತ್ಮಕವಾಗಿ ನಡೆದ ಸ್ಪರ್ಧೆಯಲ್ಲಿ ತಾಲೂಕಿನ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆಯ್ಕೆಯಾಗಿದ್ದರು. ಅದರಲ್ಲಿ 20 ವಿದ್ಯಾರ್ಥಿಗಳು ರಸ ಪ್ರಶ್ನೆ ಸ್ಪರ್ಧೆಯಲ್ಲಿ ತಮ್ಮ ಪ್ರತಿಭೆ ಮೆರೆದಿದ್ದಾರೆ. ಅಲ್ಲದೆ ನ್ಯೂ ಪಬ್ಲಿಕ್ ಶಾಲಾ ವಿದ್ಯಾರ್ಥಿನಿ, ನವೆಂಬರ್ ತಿಂಗಳಲ್ಲಿ ಧಾರವಾಡದಲ್ಲಿ ನಡೆಯಲಿರುವ ರಾಜ್ಯಮಟ್ಟದ ರಸ ಪ್ರಶ್ನೆ ಸ್ಪರ್ಧೆಗೆ ಆಯ್ಕೆಯಾಗಿ ತನ್ನ ಪ್ರತಿಭೆ ಮೆರೆದಿದ್ದಾಳೆ. ಸಾಧನೆ ಮೆರೆದು ಪ್ರೌಢ ಶಾಲೆಗೆ, ನಗರಕ್ಕೆ,ಜಿಲ್ಲೆಗೆ ಕೀರ್ತಿ ತಂದ ಪ್ರತಿಭಾವಂತ ವಿದ್ಯಾರ್ಥಿನಿ ಗೌಶಿಯಾ ಠಾಕೊರ ಇವಳಿಗೆ, ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯರು ಹಾಗೂ ಪ್ರಾಧ್ಯಾಪಕರು ಅಭಿನಂದಿಸಿದ್ದಾರೆ.