ಬಳ್ಳಾರಿ

ನಾಳೆ ಜಿಲ್ಲಾ ಮಟ್ಟದ ಉದ್ಯೋಗ ಮೇಳ

ನಾಳೆ ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಬಳ್ಳಾರಿ16 :ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಮೇ 18 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 03 ರವರೆಗೆ ತಹಶೀಲ್ದಾರ ಕಚೇರಿ ಆವರಣದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಏರ್ಪಡಿಸಲಾಗಿದೆ.

ಉದ್ಯೋಗ ಮೇಳದಲ್ಲಿ ಸುಮಾರು 06 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸುತ್ತಿದ್ದು, ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು. ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಮೂಲ ಆಧಾರ  ಕಾರ್ಡ್   ಪ್ರತಿ ಮತ್ತು ಸ್ವ-ವಿವರ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಈ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ.

*ವಿದ್ಯಾರ್ಹತೆ:* ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿ.ಇಡಿ, ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ ಅಥವಾ ಮೊ.8073365184, 9019692898 ಹಾಗೂ 7892971984 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.  


ಸುದ್ದಿ ಓದಿ