ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಅವರ ಜಿಲ್ಲಾ ಪ್ರವಾಸ ಕಾರ್ಯಕ್ರಮ
District tour program of Higher Education Minister Dr. M.C. Sudhakar
ಗದಗ 16: ರಾಜ್ಯದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಜನೆವರಿ 17 ರಂದು ಗದಗ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು ಇವರ ಈ ಕೆಳಗಿನಂತಿದೆ. ಜನೆವರಿ 17 ರಂದು ಬೆಳಿಗ್ಗೆ 9 ಗಂಟೆಯಿಂದ ಹುಬ್ಬಳ್ಳಿಯಿಂದ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಹೊರಟು ಬೆ 10.50 ಗಂಟೆಗೆ ಗದಗ ಜಿಲ್ಲೆಯ ಮುಂಡರಗಿಗೆ ಆಗಮಿಸುವರು. ಬೆಳಿಗ್ಗೆ 10.50 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಜಿಲ್ಲೆಯ ಮುಂಡರಗಿ ಅನ್ನದಾನೀಶ್ವರ ಪದವಿ ಪೂರ್ವ ಮಹಾವಿದ್ಯಾಲಯದ ಆವರಣದಲ್ಲಿ ಶ್ರೀ ಜಗದ್ಗುರು ಅನ್ನದಾನೀಶ್ವರ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ನೂತನ ಕಟ್ಟಡದ ಲೋಕಾರೆ್ಣ ಹಾಗೂ ವಿಜ್ಞಾನ ವಸ್ತು ಪ್ರದರ್ಶನ, ಸಂಸ್ಕರಣ ಗ್ರಂಥವಾದ ಜೇಂಗೊಡ ಗ್ರಂಥ ಬಿಡುಗಡೆ ಹಾಗೂ ಸಾಧಕರಿಗೆ ಮತ್ತು ದಾನಿಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸುವರು.
ಮಧ್ಯಾಹ್ನ 2 ಗಂಟೆಗೆ ಜಿಲ್ಲೆಯ ಮುಂಡರಗಿಯಿಂದ ಗದಗ ಜಿಲ್ಲಾ ಕೇಂದ್ರಕ್ಕೆ ರಸ್ತೆಯ ಮೂಲಕ ಪ್ರಯಾಣ ಮಾಡುವರು. ಮಧ್ಯಾಹ್ನ 2.45 ಗಂಟೆಗೆ ಗದಗ ಜಿಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರೊಡನೆ ಸಭೆ ನಡೆಸುವರು. ಸಂಜೆ 6 ಗಂಟೆಗೆ ಗದಗ ಜಿಲ್ಲಾ ಕೇಂದ್ರದಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಸ್ತೆಯ ಮೂಲಕ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 