ಬೆಳಗಾವಿ ವಿಭಜಿಸಿ ಚಿಕ್ಕೋಡಿ ಸೇರಿ 2-3 ಹೊಸ ಜಿಲ್ಲೆ ಘೋಷಣೆ ಮಾಡಿ
Divide Belgaum and declare 2-3 new districts
ಬೆಳಗಾವಿ 12: ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಿ ಅದರಲ್ಲಿ ಚಿಕ್ಕೋಡಿ ಸೇರಿದಂತೆ 2-ರಿಂದ 3 ಹೊಸ ಜಿಲ್ಲೆಗಳನ್ನು ಘೋಷಣೆ ಮಾಡುವಂತೆ ಚಿಕ್ಕೋಡಿ ಕ್ಷೇತ್ರದ ಗಣೇಶ ಹುಕ್ಕೇರಿ ವಿಧಾನ ಸಭೆಯಲ್ಲಿ ಶುಕ್ರವಾರ ಪ್ರಸ್ತಾಪಿಸಿದರು.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ಶುಕ್ರವಾರ ಮಧ್ಯಾಹ್ನ ವಿಧಾನ ಸಭೆಯ ಕಲಾಪದಲ್ಲಿ ಉತ್ತರ ಕರ್ನಾಟಕದ ಅಭಿವೃದ್ದಿಯ ವಿಶೇಷ ಚರ್ಚೆಯಲ್ಲಿ ಪಾಲ್ಗೋಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕೋಡಿಯನ್ನು ಹೊಸ ಜಿಲ್ಲೆಯಾಗಿ ಘೋಷಣೆ ಮಾಡುತ್ತಾರೆ ಎನ್ನುವ ವಿಶ್ವಾಸ ನನಗಿದೆ.
ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹಾಗೂ ಜಿಲ್ಲೆಯ ಸಂಸದರ ಹಾಗೂ ಶಾಸಕರ ಮತ್ತು ಮಾಜಿ ಶಾಸಕರ ಸಭೆ ಕರೆದು ಈ ಕುರಿತು ಚರ್ಚೆ ನಡೆಸಿ, ಬಳಿಕ ಬೆಳಗಾವಿ ಜಿಲ್ಲೆಯನ್ನು ವಿಭಜನೆ ಮಾಡಿ ಚಿಕ್ಕೋಡಿ ಸೇರಿದಂತೆ 2-ರಿಂದ 3 ಹೊಸ ಜಿಲ್ಲೆಗಳನ್ನು ಘೋಷಣೆ ಮಾಡುವಂತೆ ಒತ್ತಾಯಿಸಿದರು.
ಅಲ್ಲದೆ ಬೆಳಗಾವಿ ಭಾಗದಲ್ಲಿ ಕೈಗಾರಿಕೆಗಳನ್ನು ಹೆಚ್ಚಿಸುವ ಮೂಲಕ ಇಲ್ಲಿರುವ ಕೈಗಾರಿಕೆಗಳಿಗೆ ಮೂಲಭೂತ ಸೌಕರ್ಯ ನೀಡಿ, ಇಲ್ಲಿರುವ ಕೈಗಾರಿಕೆಗಳು ಕೊಲ್ಲಾಪೂರ ಪುಣೆ ಕಡೆಗೆ ಹೋಗದಂತೆ ನೋಡಿಕೊಳ್ಳುವಂತೆ ಒತ್ತಾಯಿಸಿದರು. ಇದರ ಜೊತೆಗೆ ಜೈನ್ ಸಮುದಾಯದ ನಿಗಮ ಮಂಡಳಿ ಸ್ಥಾಪನೆ ಮಾಡುವ ಮೂಲಕ ಅವರಿಗೂ ಅಲ್ಪಸಂಖ್ಯಾತರ ರೀತಿ ಸೌಕರ್ಯ ನೀಡುವಂತೆ ಒತ್ತಾಯಿಸಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 