ಕುಷ್ಟಗಿ

ಬಾಲ ಮಕ್ಕಳನ್ನು ಕೂಲಿ ಕೆಲಸಕ್ಕೆ ಸೇರಿಸಬೇಡಿ: ಸರಸ್ವತಿದೇವಿ

ಬಾಲ ಮಕ್ಕಳನ್ನು ಕೂಲಿ ಕೆಲಸಕ್ಕೆ ಸೇರಿಸಬೇಡಿ: ಸರಸ್ವತಿದೇವಿ

ಲೋಕದರ್ಶನ ವರದಿ 

ಕುಷ್ಟಗಿ 14:  ಬಾಲಕಾರ್ಮಿಕರನ್ನು ಕುಟುಂಬ ಆಧಾರಿತ ಕೆಲಸಗಳಿಗೆ ಹೊರತು ಪಡಿಸಿ ಇನ್ನಿತರೆ ಚಟುವಟಿಕೆಗಳಿಗೆ ಸೇರಿಸಿದರೆ ಅಂತಹವರ ವಿರುದ್ಧ ಶಿಕ್ಷೆ ಹಾಗೂ ದಂಡವನ್ನು ಕಟ್ಟಬೇಕಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷೆ ಸರಸ್ವತಿದೇವಿ ಹೇಳಿದರು. 

ಕಾಮರ್ಿಕ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಂದಾಯ, ಪುರಸಭೆ, ತಾಲೂಕು ಪಂಚಾಯಿತಿ, ಶಿಕ್ಷಣ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಬೆಳಗ್ಗೆ ಇಲ್ಲಿನ ಪುರಸಭೆ ಕಾಯರ್ಾಲಯದ ಸಭಾ ಭವನದಲ್ಲಿ ಏರ್ಪಡಿಸಿದ್ದ ವಿಶ್ವ ಬಾಲಕಾರ್ಮಿಕಪದ್ಧತಿ ವಿರೋಧಿ ದಿನ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಬಾಲ ಮತ್ತು ಕಿಶೋರಾವಸ್ಥೆಯಲ್ಲಿ ಮಕ್ಕಳಿಗೆ ಶಿಕ್ಷಣದ ಅಗತ್ಯವಿದೆ. 

ಶಾಲೆ ಕಲೆಯುತ್ತಿರು ಬಾಲ ಮಕ್ಕಳನ್ನು ಕೂಲಿ ಕೆಲಸಕ್ಕೆ ಸೇರಿಸಬೇಡಿ ಎಂದು ಪಾಲಕರಿಗೆ ತಿಳುವಳಿಕೆ ನೀಡಿದರು. ನಂತರ ನೂರಾರು ಕಾಮರ್ಿಕರಿಗೆ ಬಾಲ ಕಾಮರ್ಿಕ ವಿರೋಧಿ  ಪ್ರತಿಜ್ಞಾವಿಧಿ ಬೋಧಿಸಿದರು. 

ತಹಶೀಲ್ದಾರ ಎಂ.ಸಿದ್ದೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಬಾಲಕಾರ್ಮಿಕ ಜಾಗ್ರತೆ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿದರು. 

ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡರ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಕುರಿತು ವಿಶೇಷ ಉಪನ್ಯಾಸ ನೀಡಿ ಇಂದಿನ ದಿನಮಾನಗಳಲ್ಲಿ ಮಕ್ಕಳ ದುಡಿಮೆಯನ್ನು ಅವಲಂಬಿಸಿ ಬದುಕುತ್ತಿರುವ ಪಾಲಕರ ಸಂಖ್ಯೆ ಹೆಚ್ಚಾಗಿದೆ ಇದರಿಂದ ಬಾಲಕಾರ್ಮಿಕ ಸಂಖ್ಯೆ ಹೆಚ್ಚಾಗಿ ಮಗುವಿನ ಶೈಕ್ಷಣಿಕ ಬೆಳವಣಿಗೆ ಕುಂಠಿತಗೊಂಡಿದೆ ಎಂದು ವಿಷಾದಿಸಿದರು. 14 ವರ್ಷದ ಒಳಗಿನ ಮಕ್ಕಳನ್ನು ದುಡಿಯೋದಕ್ಕೆ ಕಳುಹಿಸಿದರೆ ಮಾಲೀಕರು ಜೊತೆ ಪಾಲಕರಿಗೂ ಶಿಕ್ಷೆ ಕಟ್ಟಿಟ್ಟಬುತ್ತಿ ಜೋಪಾನ ಎಂದು ಪಾಲಕರಿಗೆ ಕಿವಿಮಾತು ಹೇಳಿದರು. 

ಈ ಸಂದರ್ಭದಲ್ಲಿ ವಕೀಲರ ಸಂಘದ ಕಾರ್ಯಧ್ಯಕ್ಷ ಮಾರುತಿ ಡಿ, ಸಹಾಯಕ ಸರ್ಕಾರಿ ಅಭಿಯೋಜಕ  ರಾಯನಗೌಡ ಎಲ್, ತಾಪಂ ವ್ಯವಸ್ಥಾಪಕ ಬಸವರಾಜ ಪಾಟೀಲ್, ಕಾಮರ್ಿಕ ನಿರೀಕ್ಷಕ ಶಿವಶಂಕರ್ ತಳವಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಂದ್ರ ಕಾಂಬ್ಳೆ, ಪುರಸಭೆ ವ್ಯವಸ್ಥಾಪಕ ಷಣ್ಮುಖಪ್ಪ ಉಪಸ್ಥಿತರಿದ್ದರು 

ಸುದ್ದಿ ಓದಿ