ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ : ಡಾ. ರಾಣಿ ತಿರ್ಲಾಪೂರ
Don't neglect your health: Dr. Rani Tirlapura
ಶಿಗ್ಗಾವಿ 26: ಆರೋಗ್ಯದ ಬಗ್ಗೆ ಅಲಕ್ಷ್ಯ ಮತ್ತು ನಿರ್ಲಕ್ಷ್ಯ ಮಾಡದೇ ಹೆಚ್ಚು ಜಾಗೃತರಾಗಿರಿ ಎಂದು ಡಾ. ರಾಣಿ ತಿರ್ಲಾಪೂರ ಹೇಳಿದರು. ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ಮೃತ್ಯುಂಜಯ ನಸಿಂರ್ಗ್ ಹೋಂ ಸಹಯೋಗದಲ್ಲಿ ಪರಮಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ಹುಟ್ಟು ಹಬ್ಬದ ನಿಮಿತ್ತ ಮಹಿಳಾ ಜ್ಞಾನವಿಕಾಸ ಯೋಜನೆಯಡಿಯಲ್ಲಿ ಆರೋಗ್ಯ ತಪಾಸಣಾ ಶಿಬಿರ ಉದ್ದೇಶಿಸಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಯಾರು ಹೆಚ್ಚಿನ ಪ್ರಾಶಸ್ತ್ಯ ನೀಡುತ್ತಿಲ್ಲ ಅದು ಹೆಚ್ಚು ಪ್ರಮಾಣದಲ್ಲಿ ಉಲ್ಬಣವಾದ ನಂತರ ಕಾಳಜಿವಹಿಸಲು ಹೋಗಿ ಪರಿಣಾಮಕಾರಿಯಾದ ಚಿಕಿತ್ಸೆ ಫಲಸದೇ ಬೇರೆ ಬೇರೆ ಸ್ವರೂಪವನ್ನು ಪಡೆಯುತ್ತಿವೆ ಆದ್ದರಿಂದ ಧರ್ಮಸ್ಥಳ ಸಂಸ್ಥೆ ಜ್ಞಾನ ವಿಕಾಸ ಯೋಜನೆ ಸದುಪಯೋಗ ಪಡೆದುಕೊಳ್ಳಿರಿ ಎಂದು ಕಿವಿ ಮಾತು ಹೇಳಿದರು. ಕಾರ್ಯಕ್ರಮ ಅಧಿಕಾರಿ ಶೇಖರ ನಾಯ್ಕ ಮಾತನಾಡಿ ಡಾ ವಿರೇಂದ್ರ ಹೆಗಡೆಯವರ ಹುಟ್ಟು ಹಬ್ಬದ ನಿಮಿತ್ಯ ರಕ್ತ ತಪಾಸಣಾ ಕಾರ್ಯಕ್ರಮದ ಸದುಪಯೋಗ ಸಾರ್ವಜನಿಕರು ಪಡೆದುಕೊಳ್ಳಬೇಕು ಅಲ್ಲದೇ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ 43 ವರ್ಷಗಳಿಂದ ಸಾಮಾಜಿಕ ಸೇವೆ ಮುಖಾಂತರ ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಿದೆ ಹಾಗೂ ಜ್ಞಾನ ವಿಕಾಸ ಯೋಜನೆಯಲ್ಲಿ ಶಿಗ್ಗಾವಿ ಸವಣೂರ ತಾಲೂಕಿನ 1100 ಪಲಾನುಭವಿಗಳ ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಪುರಸಭೆ ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲ, ಸಾಹಿತಿ ಶಿವಾನಂದ ಮ್ಯಾಗೇರಿ ಮಾತನಾಡಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯೆ ಶೇಖವ್ವ ಶಿಗ್ಗಾವಿ, ಡಾ.ರವೀಂದ್ರ, ಡಾ. ಬಸವರಾಜ, ಡಾ.ಕಾವ್ಯ, ಡಾ.ದೀಪ್ತಿ ಸೇರಿದಂತೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಪದಾಧಿಕಾರಿಗಳು ಹಾಗೂ ಮೃತ್ಯುಂಜಯ ನಸಿಂರ್ಗ್ ಹೋಂ ಸಿಬ್ಬಂದಿ ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 