ಶಿಗ್ಲಿ ಪಂಚಾಯತಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ
Dr. B.R. Ambedkar Jayanti celebration in Shigli Panchayat
ಲಕ್ಷ್ಮೇಶ್ವರ 16 : ಭಾರತದ ಸಂವಿಧಾನ ಬರೆದ ಮಹಾಶಿಲ್ಪಿ ಸಮಾಜ ಸುಧಾರಕ ಅರ್ಥಶಾಸ್ತ್ರಜ್ಞ ನ್ಯಾಯವಾದಿ ದಿನ ದಲಿತರ ಮಹಿಳೆಯರ ಮತ್ತು ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಡಿ ಅಸ್ಪೃಶ್ಯತೆ ವಿರುದ್ಧ ಆಂದೋಲನದ ನೇತೃತ್ವ ವಹಿಸಿ ಸ್ವತಂತ್ರ ಭಾರತದ ಮೊದಲ ಕಾನೂನು ಸಚಿವರಾಗಿ ಸೇವೆ ಸಲ್ಲಿಸಿ ಬುದ್ಧ ಧರ್ಮವನ್ನು ಸ್ವೀಕರಿಸಿದ ಮಹಾನ್ ನಾಯಕ ಡಾ.ಬಿ.ಆರ್ ಅಂಬೇಡ್ಕರ್ ಅವರ ಕೊಡುಗೆ ಅಪಾರವಾಗಿದೆ ಎಂದು ಶಿಗ್ಲಿ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿ ರವಿ ಕೊರಕನವರ ಹೇಳಿದರು. ಅವರು ಪಂಚಾಯಿತಿ ಕಾರ್ಯಾಲಯದಲ್ಲಿ ಮಂಗಳವಾರ ಡಾ.ಬಿ. ಆರ್ ಅಂಬೇಡ್ಕರ್ ಅವರ 135 ನೇ ಜಯಂತಿಯ ಅಂಗವಾಗಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜ್ಯ ಸಲ್ಲಿಸಿ ಮಾತನಾಡಿದ ಅವರು ಡಾ ಬಿ ಆರ್ ಅಂಬೇಡ್ಕರ ತಮ್ಮ ಜೀವಿತಾವ ಅಧಿವರಿಗೂ ತಮಗಾಗಿ ಏನೆನ್ನು ಬಯಸದೆ ಬಡವರ ದೀನ ದಲಿತರ ಶೋಷಿತರ ಕಾರ್ಮಿಕರ ಅಭಿವೃದ್ಧಿಗೆ ಶ್ರಮಿಸಿದ ಮಹಾ ನಾಯಕ ಅವರ ಬರೆದ ಸವಿಧಾನದ ಹಾದಿಯಲ್ಲಿ ನಾವೆಲ್ಲರೂ ಸಾಗೋಣ ಎಂದರು. ಈ ಸಮಯದಲ್ಲಿ ಪಂಚಾಯಿತಿಯ ಎಲ್ಲಾ ಸಿಬ್ಬಂದಿ ವರ್ಗದವರು ಗ್ರಾಮದ ಮುಖಂಡರು ಮುದ್ದು ಮಕ್ಕಳು ಪಾಲ್ಗೊಂಡಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 