ಡಾ. ಫ. ಗು. ಹಳಕಟ್ಟಿ ಕಾಲೇಜಿಗೆ 28ನೆ ರಾ್ಯಂಕ್
Dr. F. Gu. Halakatti College ranked 28th
ಡಾ. ಫ. ಗು. ಹಳಕಟ್ಟಿ ಕಾಲೇಜಿಗೆ 28ನೆ ರಾ್ಯಂಕ್
ವಿಜಯಪುರ 31: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ ಕಾಲೇಜುಗಳಲ್ಲಿ 28ನೆ ರಾ್ಯಂಕ್ ಲಭಿಸಿದೆ. ನ್ಯಾಷನಲ್ ಟೈಮ್ಸ್ ಎಂಜಿನಿಯರಿಂಗ್ ರಾ್ಯಂಕಿಂಗ್ ನಡೆಸಿದ ಸಮೀಕ್ಷೆಯಲ್ಲಿ ಈ ಸ್ಥಾನ ಪ್ರಾಪ್ತವಾಗಿದೆ. ಈ ಸಂಸ್ಥೆ ದೇಶದ ನಾನಾ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸಮೀಕ್ಷೆ ನಡೆಸಿದ್ದು, ಬಿ.ಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ 125 ಕಾಲೇಜುಗಳ ಪೈಕಿ 28 ರಾ್ಯಂಕ್ ಲಭಿಸಿದೆ. ಅಷ್ಟೇ ಅಲ್ಲ, ಕಾಲೇಜಿನ ವಿದ್ಯಾರ್ಥಿಗಳಿಗೆ ಉದ್ಯೋಗ ವ್ಯವಸ್ಥೆ ಮಾಡುವಲ್ಲಿ ದೇಶದ ಉನ್ನತ 70 ಖಾಸಗಿ ಕಾಲೇಜುಗಳ ಪೈಕಿ ಬಿ.ಎಲ್.ಡಿ.ಇ ಎಂಜಿನಿಯರಿಂಗ್ ಕಾಲೇಜಿಗೆ 45ನೇ ರಾ್ಯಂಕ್ ಬಂದಿದೆ. ಇದರ ಜೊತೆಗೆ ದಕ್ಷಿಣ ಭಾರತದ ಉನ್ನತ ಎಂಜಿನಿಯರಿಂಗ್ ಕಾಲೇಜು ವಿಭಾಗಗಳಲ್ಲಿ 15ನೇ ರಾ್ಯಂಕ್ ಲಭಿಸಿದೆ. ಕಾಲೇಜಿನ ಈ ಸಾಧನೆಗೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಸಂತನ ವ್ಯಕ್ತಪಡಿಸಿದ್ದು, ಕಾಲೇಜಿನ ಎಲ್ಲ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ ಎಂದು ಕಾಲೇಜಿನ ನಿರ್ದೇಶಕ ಡಾ. ವಿ. ಜಿ. ಸಂಗಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 