ಡಾ, ಕೆ,ಜಿ ,ಕುಲಕರ್ಣಿ ಗೆ ರಾಷ್ಟ್ರೀಯ ಅತ್ಯುತ್ತಮ ಕುಟುಂಬ ವೈದ್ಯ ಪ್ರಶಸ್ತಿ ಪ್ರಧಾನ : ಅಭಿನಂದನೆ
Dr. K.G. Kulkarni receives National Best Family Doctor Award: Congratulations
ಕೊಪ್ಪಳ 02: ಇಲ್ಲಿನ ಹಿರಿಯ ವೈದ್ಯ ಡಾ ಕೆ,ಜಿ ಕುಲಕರ್ಣಿಯವರ ಸುಮಾರು 54 ವರ್ಷಗಳ ಸುಧೀರ್ಘ ವೈದ್ಯಕೀಯ ಕ್ಷೇತ್ರದ ಅತ್ಯುತ್ತಮ ಸೇವೆಗಾಗಿ ಭಾರತೀಯ ವೈದ್ಯಕೀಯ ಸಂಘ ಕೇಂದ್ರ ಶಾಖೆ ವತಿಯಿಂದ ಕೊಡ ಮಾಡುವ ಪ್ರತಿಷ್ಠಿತ ರಾಷ್ಟ್ರಮಟ್ಟದ ಏಕೈಕ ಪ್ರಶಸ್ತಿಯಾದ ರಾಷ್ಟ್ರೀಯ ಅತ್ಯುತ್ತಮ ಕುಟುಂಬ ವೈದ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು, ಕಳೆದ 2025ರ ಡಿಸೆಂಬರ್ 27ರಂದು ಗುಜರಾತ್ ರಾಜ್ಯದ ಅಹ್ಮದಾಬಾದ್ ಮಹಾ ನಗರದಲ್ಲಿ ಜರುಗಿದ ರಾಷ್ಟ್ರೀಯ ವೈದ್ಯಕೀಯ ಸಮ್ಮೇಳನದಲ್ಲಿ ಕೊಪ್ಪಳದ ಹಿರಿಯ ವೈದ್ಯ ಹಾಗೂ ಸಾಮಾನ್ಯ ಜನರ ಪ್ರೀತಿ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿ ಸುಧೀರ್ಘ ಸೇವೆ ಸಲ್ಲಿಸಿ ವೈದ್ಯಕೀಯ ಹಾಗೂ ಸಾಮಾಜಿಕ ರಂಗದಲ್ಲಿ ತಮ್ಮನ್ನು ತಾವು ಸಕ್ರಿಯವಾಗಿ ತೊಡಗಿಸಿಕೊಂಡು ಉತ್ತಮ ಸೇವೆ ಸಲ್ಲಿಸಿದ್ದು ಅವರ ಈ ವೈದ್ಯಕೀಯ ಕ್ಷೇತ್ರದ ಸೇವೆಗಾಗಿ ರಾಷ್ಟ್ರಮಟ್ಟದ ಅತ್ಯುತ್ತಮ ಕುಟುಂಬ ವೈದ್ಯ ಪ್ರಶಸ್ತಿಯನ್ನು ಅವರಿಗೆ ನೀಡಿ ಗೌರವಿಸಿದ ಈ ಸಂದರ್ಭದಲ್ಲಿ ಗುಜರಾತ್ ರಾಜ್ಯದ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ , ಭಾರತೀಯ ವೈದ್ಯಕೀಯ ಸಂಘದ ರಾಷ್ಟ್ರೀಯ ಅಧ್ಯಕ್ಷ ಡಾ, ಶರತ್ ಕುಮಾರ್ ಅಗರ್ ವಾಲ್, ವೈದ್ಯಕೀಯ ವಿಶ್ವಸಂಸ್ಥೆಯ ಮಾಜಿ ಅಧ್ಯಕ್ಷ ಕೇತನ್ ದೇಸಾಯಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು, ಇಲ್ಲಿಯ ಹಿರಿಯ ವೈದ್ಯ ಡಾ, ಕೆ,ಜಿ, ಕುಲಕರ್ಣಿ ಅವರಿಗೆ ಪ್ರತಿಷ್ಠಿತ ರಾಷ್ಟ್ರಭಟ್ಟದ ಪ್ರಶಸ್ತಿ ಲಭಿಸಿರುವುದಕ್ಕೆ ಇಲ್ಲಿನ ಸಂಘಟನೆಗಳು ವಿಶೇಷವಾಗಿ ಕೊಪ್ಪಳ ರೋಟರಿ ಕ್ಲಬ್ ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಲ್ಲದೆ ಹಲವು ಸಂಘಟನೆಗಳು ಜನಪ್ರತಿನಿಧಿಗಳು ರಾಜಕಾರಣಿಗಳು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ,
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 