ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನಕ್ಕೆ ಚಾಲನೆ
ಬೈಲಹೊಂಗಲ: ಉದ್ಯೋಗ ಖಾತ್ರಿ ನಡಿಗೆ ಸುಸ್ಥಿರತೆಯೆಡೆಗೆ ಅಭಿಯಾನ ಕಾರ್ಯಕ್ರಮಕ್ಕೆ ತಾಪಂ ಕಾರ್ಯಾಲಯದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಎಸ್. ಎಸ್. ಸಂಪಗಾಂವಿ ಚಾಲನೆ ನೀಡಿದರು.
ಈ ಕಾರ್ಯಕ್ರಮ ಅ.31ರವರೆಗೆ ಪ್ರತಿ ಗ್ರಾಮ ಪಂಚಾಯತ ಮಟ್ಟದಲ್ಲಿ ಜರುಗಲಿದ್ದು ಮತ್ತು ಮನೆ ಮನೆ ಭೇಟಿ ನೀಡಿ ಯೋಜನೆಯ ಕುರಿತು ಜನಸಾಮಾನ್ಯರಿಗೆ ಮಾಹಿತಿಯನ್ನು ನೀಡುವುದು, ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಗಳ ಬೇಡಿಕೆಗಳನ್ನು ಪಡೆದುಕೊಂಡು ಗ್ರಾಮ ಸಭಾ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವ ಮೂಲಕ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಲ್ಲಿ ಎಲ್ಲಾ ಅಧಿಕಾರಿಗಳು ಶ್ರಮಿಸುವಂತೆ ಕರೆ ನೀಡಿದರು.
ಸಹಾಯಕ ನಿರ್ದೇಶಕರು ವಿಜಯ ಪಾಟೀಲ, ರಘು ಬಿ ಎನ್, ಪ್ರಶಾಂತ ಹಿರೇಮಠ, ರಾಜಶೇಖರ ಕಡೆಮನಿ. ಎಲ್ಲಾ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ತಾಲೂಕಾ ನರೇಗಾ ಸಿಬ್ಬಂದಿಗಳು ಮತ್ತು ತಾಲೂಕ ಪಂಚಾಯತ ಸಿಬ್ಬಂದಿಗಳು ಉಪಸ್ಥಿತರಿದ್ದರು