ಮುಂಗಾರು ಸಮಗ್ರ ಕೃಷಿ ಜಾಗೃತಿ ಅಭಿಯಾನಕ್ಕೆ ಡಿಸಿ ಚಾಲನೆ
ಹಾವೇರಿ17: ಮುಂಗಾರು ಹಂಗಾಮಿನ ಬೆಳೆ ಮಾಹಿತಿ ಹಾಗೂ ಕೃಷಿ ತಾಂತ್ರಿಕತೆ ಕುರಿತಂತೆ ಜಿಲ್ಲೆಯ ರೈತರಿಗೆ ಮಾಹಿತಿ ನೀಡಲು ಕೃಷಿ ಇಲಾಖೆ ಆಯೋಜಿಸಿರುವ ಮುಂಗಾರು ಸಮಗ್ರ ಕೃಷಿ ಅಭಿಯಾನ ಜಾಗೃತಿ ಪ್ರಚಾರ ವಾಹನಗಳಿಗೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಅವರು ಚಾಲನೆ ನೀಡಿದರು.
ಇಂದಿನಿಂದ ಮೂರು ದಿನಗಳ ಕಾಲ "ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ"ಎಂಬ ಶೀಷರ್ಿಕೆಯಡಿ ಜಿಲ್ಲೆಯ ಎಲ್ಲ ಗ್ರಾಮಗಳಿಗೂ ಭೇಟಿ ನೀಡಿ ಕೃಷಿ ಮುಂಗಾರು ಬಿತ್ತನೆ, ಬೀಜದ ಸಮಗ್ರ ನಿರ್ವಹಣೆ, ಬೆಳಗಳ ಸಮಗ್ರ ಕೀಟದ ನಿರ್ವಹಣೆ, ನೀರು ನಿರ್ವಹಣೆ, ಬೆಳೆ ನಿರ್ವಹಣೆ ಹಾಗೂ ವಿವಿಧ ಕೃಷಿ ಯೋಜನೆಗಳ ಕುರಿತಂತೆ ಗ್ರಾಮಗಳಿಗೆ ತೆರಳಿ ವಿಡಿಯೋ ಪ್ರದರ್ಶನ, ಕೃಷಿ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಹಾಗೂ ವಿವಿಧ ಕೃಷಿ ಯೋಜನೆಗಳ ಕರಪತ್ರಗಳನ್ನು ರೈತರ ಮನೆ ಬಾಗಿಲೆಗೆ ತಲುಪಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮೊದಲೆರಡು ದಿನ ಪ್ರಚಾರ, ಕೊನೆಯ ದಿನ ಅಲ್ಲಲ್ಲಿ ವೇದಿಕೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರೈತರಿಗೆ ವಿಶೇಷ ಮಾಹಿತಿ ನೀಡುವ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಈ ಉದ್ದೇಶದಿಂದ ಪ್ರತಿ ತಾಲೂಕಿಗೆ ಒಂದಂತೆ ವಿಶೇಷ ವಿನ್ಯಾಸಗೊಳಿಸಿದ ವಾಹನವನ್ನು ಸಿದ್ಧಪಡಿಸಲಾಗಿದೆ. ಗ್ರಾಮಗಳಿಗೆ ಸಂಚಾರ ಮಾಡುವ ವಾಹನಗಳು ಹಳ್ಳಿ ಹಳ್ಳಿಗಳಿಗೂ ಕೃಷಿ ಇಲಾಖೆ ಯೋಜನೆಗಳಾದ ಕೃಷಿ ಭಾಗ್ಯ ಯೋಜನೆ, ಕನರ್ಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ವಿಮಾ ಯೋಜನೆ, ಕೃಷಿ ಅಭಿಯಾನ ಯೋಜನೆ, ಕೃಷಿ ಯಂತ್ರಧಾರೆ ಯೋಜನೆ, ಪ್ರಮಾಣಿತ ಗುಣಮಟ್ಟದ ಬಿತ್ತನೆ ಬೀಜ, ಕೃಷಿ ಯಾಂತ್ರೀಕರಣ ಯೋಜನೆ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ರಾಷ್ಟ್ರೀಯ ಆಹಾರ ಭದ್ರತೆ ಯೋಜನೆ, ಪ್ರದಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಪರಂಪರಾಗತ ಕೃಷಿ ವಿಕಾಸ ಯೋಜನೆ, ಮಣ್ಣು ಆರೋಗ್ಯ ಅಭಿಯಾನ, ಸಾವಯವ ಭಾಗ್ಯ, ಕೃಷಿ ಉತ್ಪನ್ನಗಳ ಸಂಸ್ಕರಣೆ, ಆತ್ಮಾ, ಕೃಷಿ ಉತ್ಪನ್ನಗಳ ಯೋಜನೆ ಮಾಹಿತಿ ಯನ್ನು ತಲುಪಿಸಲಿವೆ.
ಜಿಲ್ಲೆಯ ರಾಣೇಬೆನ್ನೂರು, ರಟ್ಟೀಹಳ್ಳಿ, ಹಿರೇಕೆರೂರು, ಬ್ಯಾಡಗಿ, ಹಾನಗಲ್, ಶಿಗ್ಗಾಂವ, ಸವಣೂರ ಹಾಗೂ ಹಾವೇರಿ ತಾಲೂಕಿಗೆ ಪ್ರತ್ಯೇಕ ವಾಹನಗಳನ್ನು ವಿನ್ಯಾಸಗೊಳಿಸಿ ಜಾಗೃತಿ ಮೂಡಿಸಲು ಸಜ್ಜಾಗಿದೆ. ಇದರೊಂದಿಗೆ ಕೃಷಿ ಅಧಿಕಾರಿಗಳು ತೆರಳಿ ರೈತರಿಗೆ ಮಾಹಿತಿ ನೀಡುವ ಕೆಲಸ ಮಾಡಲಿವೆ. ಇದೇ ಸಂದರ್ಭದಲ್ಲಿ ವಿವಿಧ ಯೋಜನೆಗಳ ಕರಪತ್ರಗಳನ್ನು ಬಿಡುಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ.ಮುಖ್ಯ ಕಾರ್ಯನಿವರ್ಾಹಣಾಧಿಕಾರಿ ಕೆ.ಲೀಲಾವತಿ , ಜಂಟಿ ಕೃಷಿ ನಿದರ್ೆಶಕ ಬಿ.ಮಂಜುನಾಥ್ ಹಾಗೂ ಇತರ ಕೃಷಿ ಅಧಿಕಾರಿಗಳು ಭಾಗವಹಿಸಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 