ಲೋಕದರ್ಶನ ವರದಿ
ವಿಜಯಪುರ 02:ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾಮರ್ಿಕ ಪದ್ಧತಿಯ ಜನ ಜಾಗೃತಿ ಸಂಚಾರಿ ವಾಹನಕ್ಕೆ ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಅವರು ಚಾಲನೆ ನೀಡಿದರು.
ಜಿಲ್ಲಾಡಳಿತ, ಕಾಮರ್ಿಕ ಇಲಾಖೆ ಹಾಗೂ ರಾಷ್ಟ್ರೀಯ ಬಾಲಕಾಮರ್ಿಕ ಯೋಜನಾ ಸಂಘ ವಿಜಯಪುರ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಂಚಾರಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು, ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾಮರ್ಿಕ ಪದ್ಧತಿಯಿಂದ ಮಕ್ಕಳು ದೈಹಿಕವಾಗಿ, ನೈತಿಕವಾಗಿ, ಮಾನಸಿಕವಾಗಿ ಹಾಗೂ ಆಥರ್ಿಕವಾಗಿ ಶೋಷಣೆಗೊಳಪಟ್ಟು ಶಿಕ್ಷಣ ಹಾಗೂ ಸವರ್ಾಂಗಿಣ ಪ್ರಗತಿಯಿಂದ ಕುಂಠಿತವಾಗುತ್ತಾರೆ. ಈ ಅನಿಷ್ಠ ಪದ್ಧತಿಯನ್ನು ಸಂಪೂರ್ಣವಾಗಿ ತೊಲಗಿಸಲು ಎಲ್ಲ ಇಲಾಖೆ ಅಧಿಕಾರಿಗಳು, ಸಂಘ, ಸಂಸ್ಥೆಗಳು ಹಾಗೂ ಸಾರ್ವಜನಿಕರು ಒಂದಾಗಿ ಪ್ರಯತ್ನಿಸಬೇಕಾಗಿದೆ ಎಂದು ಹೇಳಿದರು.
ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾಮರ್ಿಕ ತಿದ್ದುಪಡಿ ಕಾಯ್ದೆಯನ್ನು ಸರಿಯಾಗಿ ಅನುಷ್ಠಾನಗೊಳಿಸುವುದು ಮುಖ್ಯವಾಗಿದೆ. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆ ಕಾಮರ್ಿಕ ತಿದ್ದುಪಡಿ ಕಾಯ್ದೆಯಲ್ಲಿ ತಿಳಿಸಿರುವಂತೆ 14 ವರ್ಷಕ್ಕಿಂತ ಕಡಿಮೆಯಿರುವ ಯಾವುದೇ ಮಗು ಕೆಲಸಕ್ಕೆ ನಿಯೋಜಿಸತಕ್ಕದ್ದಲ್ಲ. ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಯಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಬಾಲಕಾಮರ್ಿಕರನ್ನು ನೇಮಿಸಿಕೊಂಡಂತಹ ಸಂಸ್ಥೆಗಳಿಗೆ 6 ತಿಂಗಳಿಂದ 2 ವರ್ಷದವರೆಗೆ ಜೈಲು ಅಥವಾ 20 ರಿಂದ 50 ಸಾವಿರ ರೂ. ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ ಎಂದು ಹೇಳಿದರು.
ಈ ಸಂಚಾರಿ ವಾಹನವು ಜನವರಿ 29 ರಿಂದ 8 ದಿನಗಳವರೆಗೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಸಂಚರಿಸಿ ಸಾರ್ವಜನಿಕರಲ್ಲಿ ಬಾಲಕಾಮರ್ಿಕ ಪದ್ಧತಿ ನಿಷೇಧ ಕುರಿತು ಅರಿವು ಮೂಡಿಸಲಿದೆ. ಕಾರ್ಯಕ್ರಮದಲ್ಲಿ ಬೆಳಗಾವಿ ವಿಭಾಗದ ಸಹಾಯಕ ಕಾಮರ್ಿಕ ಆಯುಕ್ತರಾದ ನಾಗೇಶ ಸೇರಿದಂತೆ ಇತರ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.