ಮಕ್ಕಳು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ: ಕೆ.ಲೀಲಾವತಿ
ಹಾವೇರಿ25: ಮಕ್ಕಳು ರಜಾ ದಿನಗಳಲ್ಲಿ ಸಮಯ ವ್ಯರ್ಥಮಾಡದೇ ಶಿಬಿರದಲ್ಲಿ ಪಾಲ್ಗೊಂಡು ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಕ ಅಧಿಕಾರಿ ಶ್ರೀಮತಿ ಕೆ.ಲೀಲಾವತಿ ಅವರು ಹೇಳಿದರು.
ಗುರುವಾರ ನಾಗೇಂದ್ರನಮಟ್ಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ.8ರಲ್ಲಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯರ್ಾಲಯ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಆಶ್ರಯದಲ್ಲಿ ಜರುಗಿದ ಬೇಸಿಗೆ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳು ವಯಕ್ತಿಕ ಸ್ವಚ್ಛತೆ ಹಾಗೂ ಪರಿಸರ ಕಾಳಜಿ ಬಗ್ಗೆ ಅರಿವು ಹೊಂದಬೇಕು. ಜೊತೆಗೆ ವಿವಿಧ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದರ್ೆಶಕ ಅಂದಾನೆಪ್ಪ ವಡಗೇರಿ ಅವರು ಮಾತನಾಡಿ, ಮಕ್ಕಳಿಗೆ ವಿವಿಧ ವಿಷಯಗಳಲ್ಲಿ ತರಬೇತಿ ನೀಡಲಾಗುವುದು ಎಂದು ಹೇಳಿದರು.
ಆಶಾಕಿರಣ ಸಂಸ್ಥೆಯ ಮುತ್ತುರಾಜ ಮಾದರ, ಗೋವಿಂದಪ್ಪ ದೊಡ್ಡಮನಿ, ಪರಮೇಶ್ವರ ಬಡಿಗೇರ, ಉಮೇಶ ಮರೋಳ, ಸಿ.ಜಿ,ಬ್ಯಾಡಗಿ, ವಾಣಿ, ಕೋತಂಬರಿ, ಬಳ್ಳಾರಿ, ಸುಧಾಬಾಯಿ, ಎಸ್.ಎಂ.ಬಡಿಗೇರ, ಮುಖ್ಯೋಪಾಧ್ಯಯ ಅಶೋಕ ಹಾವನೂರ ಉಪಸ್ಥಿತರಿದ್ದರು. ಬಿ.ಆರ್.ಸಿ. ಸಿ.ಎಸ್.ಭಗವಂತಗೌಡ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಶಿವಣ್ಣ ಸ್ವಾಗತಿಸಿದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 