ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಿ: ಅವಜಿ
Ensure children receive the two drops of polio vaccine without fail: Avaji
ವಿಜಯಪುರ 28: ಎಲ್ಲ ಸಾರ್ವಜನಿಕರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆಯನ್ನು ತಪ್ಪದೆ ಹಾಕಿಸಬೇಕೆಂದು ವಿಜಯಪುರ್ ತಾಲೂಕ ಪಂಚ ಗ್ಯಾರಂಟಿ ಸಮಿತಿ ಅಧ್ಯಕ್ಷ ರಾಜಶೇಖರ ಅವಜಿ ತಿಳಿಸಿದರು. ಶಿವಣಗಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಹಡಗಲಿ ತಾಂಡಾನಂಬರ್ ಮೂರರ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು, ಮಗುವಿಗೆ ಎರಡು ಹನಿ ಪೊಲಿಯೋ ಲಸಿಕೆಯನ್ನು ಹಾಕುವ ಮುಖಾಂತರ ಉದ್ಘಾಟಿಸಿ ಮಾತನಾಡಿದವರು, ನಮ್ಮ ಭಾರತ ದೇಶ ಪೋಲಿಯೋ ಮುಕ್ತ ದೇಶವಾಗಿದೆ, ಕೆಲವು ದೇಶಗಳಲ್ಲಿ ಪೋಲಿಯೊ ಇನ್ನು ಬೀತಿಯನ್ನುಂಟು ಮಾಡುತ್ತಿದ್ದು, ಮುನ್ನೆಚ್ಚರಿಕೆಯಾಗಿ ಈ ಲಸಿಕಾ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದೆ,
ಪೋಲಿಯೋ ಒಂದು ಶಾಶ್ವತ ಅಂಗವೈಕಲ್ಯವನ್ನು ಉಂಟುಮಾಡಬಲ್ಲ ಅಪಾಯಕಾರಿ ರೋಗ. ಕೇವಲ ಎರಡು ಹನಿ ಲಸಿಕೆ ನಿಮ್ಮ ಮಗುವಿನ ಆರೋಗ್ಯಕರ ಭವಿಷ್ಯಕ್ಕೆ ಭದ್ರತೆ ನೀಡುತ್ತದೆ.ಈ ಮೊದಲು ಮಗುವಿಗೆ ನೀವು ಎಷ್ಟೇ ಬಾರಿ ಪೋಲಿಯೋ ಲಸಿಕೆಯನ್ನು ಹಾಕಿಸಿದ್ದರು ಕೂಡ,ಈಗ ಮತ್ತೆ 5 ವರ್ಷದ ಒಳಗಿನ ಎಲ್ಲ ಮಕ್ಕಳಿಗು ಎರಡು ಹನಿ ಪೋಲಿಯೋ ಲಸಿಕೆಯನ್ನು ಹಾಕಿಸಬೇಕು,
ಪೋಲಿಯೋ ಲಸಿಕೆ ಸಂಪೂರ್ಣ ಸುರಕ್ಷಿತ ಲಸಿಕೆ ಯಾಗಿದೆ. ಎಲ್ಲರೂ ತಮ್ಮ ಮಕ್ಕಳಿಗೆ ಪೋಲಿಯೋ ಲಸಿಕೆಯನ್ನು ಹಾಕಿಸುವುದರಿಂದ ಸಂಪೂರ್ಣ ರಕ್ಷಣೆ ಪಡೆಯಬಹುದಾಗಿದೆ. ಪೋಲಿಯೋ ವಿರುದ್ಧ ನಿರಂತರ ಗೆಲುವು ಮುಂದುವರಿಸೋಣ, ಗ್ರಾಮದ ಎಲ್ಲ ಸಾರ್ವಜನಿಕರ ಮತ್ತು ವಿವಿಧ ಇಲಾಖೆಯ ಸಹಕಾರದಿಂದ,ಆರೋಗ್ಯ ಇಲಾಖೆ ಜೊತೆ ಗುಡಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ ಎಂದರು.
ಮಾಜಿ ತಾಲೂಕು ಪಂಚಾಯತ್ ಸದಸ್ಯ ಶಂಕರ್ ರಾಠೋಡ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಚೈತನ್ಯ ರಘುನಾಥ ರಾಠೋಡ ಹಾಗೂ ಆರೋಗ್ಯ ನೀರೀಕ್ಷಣಾಧಿಕಾರಿ ಆರ್ ಎಸ್ ಪಾಟೀಲ, ಸಮುದಾಯ ಆರೋಗ್ಯ ಅಧಿಕಾರಿ ಲಕ್ಷ್ಮಿ ಅಗಸಿಬಾಗಿಲ, ಆಶಾ ಕಾರ್ಯಕರ್ತೆ ಬೇಬಿಬಾಯಿ ಪವಾರ, ಅಂಗನವಾಡಿ ಕಾರ್ಯಕರ್ತೆ ಸೋನಾಬಾಯಿ ನಾಯಕ್, ಹಡಗಲಿತಾಂಡಾ ಗ್ರಾಮದ ನಾಗರಿಕರು, ಮಕ್ಕಳು ಪಾಲ್ಗೊಂಡಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 