ಪರಿಸರ ಜಾಗೃತಿ ಕಾರ್ಯಕ್ರಮ
Environmental awareness programme
ಕಾರವಾರ, ನ.26 : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಚೇರಿ ವತಿಯಿಂದ ಕಾರವಾರ ನಗರಸಭೆ ಸಭಾಭವನದಲ್ಲಿ “ರಾಷಿೊಥಯ ಐಕ್ಯತಾ ಸಪ್ತಾಹ” ಅಂಗವಾಗಿ ಪರಿಸರ ರಕ್ಷಣಾ ದಿನದ ಪ್ರಯುಕ್ತ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಪೌರಾಯುಕ್ತ ಜಗದೀಶ ಬಾಬು ಹುಲಗಜ್ಜಿ ಅಧ್ಯಕ್ಷತೆಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಯಿತು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರವಾರ ಪ್ರಾದೇಶಿಕ ಕಚೇರಿಯ ಪರಿಸರ ಅಧಿಕಾರಿ ಬಿ.ಕೆ. ಸಂತೋಷ ಕಾರ್ಯಕ್ರಮವನ್ನು ಉದ್ಘಾಟಿಸಿ ಪರಿಸರ ರಕ್ಷಣೆ ಎಲ್ಲರ ಕರ್ತವ್ಯವಾಗಿದೆ ಎಂದರು ಹಾಗೂ ಘನತ್ಯಾಜ್ಯ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್, ಕಟ್ಟಡ ತ್ಯಾಜ್ಯ, ಇ-ತ್ಯಾಜ್ಯ, ಬ್ಯಾಟರಿ ತ್ಯಾಜ್ಯ, ಜೀವ ವೈದ್ಯಕೀಯ ತ್ಯಾಜ್ಯಗಳ ನಿರ್ವಹಣೆಯ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಇವರು ಜಲ, ವಾಯು ಮತ್ತು ಭೂ ಮಾಲಿನ್ಯ ಹಾಗೂ ಶಬ್ಧ ಮಾಲಿನ್ಯದ ಕಾರಣ, ಪರಿಣಾಮ ಹಾಗೂ ನಿಯಂತ್ರಣದ ವಿಧಾನಗಳ ಬಗ್ಗೆ ತಿಳಿಸುತ್ತ, ಪ್ರಕೃತಿ ಮನುಷ್ಯ ಜೀವನಕ್ಕೆ ಏನೆಲ್ಲ ಕೊಟ್ಟಿಲ್ಲ ಅಂತದ್ದಲ್ಲಿ ಮನುಷ್ಯ ತನ್ನ ವೈಯಕ್ತಿಯ ಪ್ರಯೋಜನಕ್ಕಾಗಿ ಪರಿಸರದ ಮೇಲೆ ನಿರಂತರ ದಾಳಿ ನಡೆಸಿದ್ದಾನೆ. ಇಂತಹ ಪರಿಸ್ಥಿತಿ ಹೀಗೆ ಮುಂದುವರೆದರೆ ನಮ್ಮ ಸರ್ವನಾಶ ನಮ್ಮ ಕಣ್ಣೇದುರೆ ನಡೆಯಲಿದೆ. ಇದು ನಡೆಯಬಾರದೆಂದರೆ ಇಂದಿನಿಂದಲೇ ಪರಿಸರದ ಸಂರಕ್ಷಣೆ ಬಗ್ಗೆ ಕಾಳಜಿ ವಹಿಸುವುದು ಮುಖ್ಯ ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಾರವಾರ ಪಾದೇಶಿಕ ಕಚೇಯ ಉಪ ಪರಿಸರ ಅಧಿಕಾರಿ ಡಾ. ಗಣಪತಿ ಹೆಗಡೆ ಮಾತನಾಡಿ, ಮಾನವನ ಅಸ್ತಿತ್ವಕ್ಕೆ ಪರಿಸರವೇ ಮೂಲ. ಪ್ರತಿ ಕ್ಷಣ ಉಸಿರಾಡುವ ವಾಯು, ಕುಡಿಯುವ ನೀರು, ತಿನ್ನುವ ಆಹಾರ ಐಷರಾಮಿ ಜೀವನಕ್ಕೆ ಬೇಕಾದ ಎಲ್ಲ ವಸ್ತುಗಳು ಪರಿಸರದ್ದೇ. ಪರಿಸರ ಮಾತೆಯ ಸಂಪತ್ತಿನಲ್ಲಿ, ಕರುಣೆಯಲ್ಲಿ, ರಕ್ಷಣೆಯಲ್ಲಿ ನಾವು ಬದುಕುತ್ತಿದ್ದೇವೆ. ಆ ಕಾರಣ ಪ್ರಕೃತಿ ದೇವತೆಯನ್ನು ಗೌರವಿಸುವಂತೆ, ಪ್ರೀತಿಸುವಂತೆ ಕರೆ ನೀಡಿ, ರಾಷಿೊಥಯ ಐಕ್ಯತಾ ಸಪ್ತಾಹದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.
ಈ ಕಾರ್ಯಕ್ರಮದಲ್ಲಿ ನಗರಸಭೆಯ ಹಿರಿಯ ಆರೋಗ್ಯ ನೀರೀಕ್ಷಕ ಸುನೀಲ ಗಾವಡೆ ಸ್ವಾಗತಿಸಿ, ನಿರೂಪಿಸಿದರು. ಕಿರಿಯ ಆರೋಗ್ಯ ನೀರೀಕ್ಷಕ ದೀಪಾ ಎಮ್. ಶೆಟ್ಟಿ ಹಾಗೂ ಕಾರವಾರ ನಗರಸಭೆಯ ಇತರ ಸಿಬ್ಬಂದಿಗಳು, ಸಾರ್ವಜನಿಕರು ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 